ಅಮರಾವತಿ: 2024ರ ವಿಧಾನಸಭಾ ಚುನಾವಣೆ ಗೆಲುವಿಗೆ ಒಂದು ವರ್ಷ ಪೂರ್ಣಗೊಂಡಿದ್ದು, ಚುನಾವಣಾ ಫಲಿತಾಂಶ ಘೋಷಣೆಯಾದ ಜೂನ್4 ಅನ್ನು 'ಪ್ರಜಾ ತೀರ್ಪು ದಿನ' ಎಂದು ಆಚರಿಸಲಾಗುತ್ತದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘೋಷಿಸಿದರು.
ಈ ಕುರಿತು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೊಸ್ಟ್ ಮಾಡಿದ್ದಾರೆ.
ಹಿಂದಿನ ವೈಎಸ್‌ಆರ್‌ಪಿಸಿ ಸರ್ಕಾರದ ದಬ್ಬಾಳಿಕೆಯ ಆಡಳಿತವನ್ನು ಕೊನೆಗೊಳಿಸಿ ರಾಜ್ಯದಲ್ಲಿ ಪ್ರಜಾಪ್ರಭುತ್ವ ಮತ್ತು ಶಾಂತಿಯನ್ನು ಸ್ಥಾಪಿಸಲಾಗಿದೆ ಎಂದರು.
ಜನರ ಕಲ್ಯಾಣ, ಅಭಿವೃದ್ಧಿ ಮತ್ತು ಉತ್ತಮ ಆಡಳಿತವನ್ನು ಜಾರಿಗೊಳಿಸಲು ಸಹಕರಿಸಿದ ಪಕ್ಷದ ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರಿಗೆ ಧನ್ಯವಾದ ಸಮರ್ಪಿಸಿದರು.
ಮುಂದಿನ ನಾಲ್ಕು ವರ್ಷಗಳ ಆಡಳಿತದಲ್ಲಿ ಜನರ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲಾಗುತ್ತದೆ ಎಂದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನರು ತಮ್ಮ ಮತಗಳ ಮೂಲಕ ಐದು ವರ್ಷಗಳ 'ಅರಾಜಕ ಆಡಳಿತ'ವನ್ನು ಕೊನೆಗೊಳಿಸಿದ್ದರು ಎಂದು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಹೇಳಿದರು.
2024ರ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಟಿಡಿಪಿ- ಜನಸೇನಾ- ಬಿಜೆಪಿ ಪಕ್ಷಗಳ ಮೈತ್ರಿಕೂಟವು 164 ಸ್ಥಾನಗಳನ್ನು ಗೆಲ್ಲುವ ಮೂಲಕ ಹೊಸ ಸರ್ಕಾರವನ್ನು ರಚಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.