ಚಂದ್ರಬಾಬು ನಾಯ್ಡು
ಅಮರಾವತಿ: ಆಟೊ ಮತ್ತು ಕ್ಯಾಬ್ ಚಾಲಕರ ಆರ್ಥಿಕ ಪರಿಸ್ಥಿತಿಯನ್ನು ಬಲಪಡಿಸುವ ನಿಟ್ಟಿನಲ್ಲಿ ‘ಆಟೊ ಡ್ರೈವರ್ಲ ಸೇವಾಲೊ ಯೋಜನೆ’ಗೆ (ಆಟೊ ಚಾಲಕರ ಸೇವಾ ಯೋಜನೆ) ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಜಯವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಶನಿವಾರ ಚಾಲನೆ ನೀಡಲಿದ್ದಾರೆ.
2.9 ಲಕ್ಷಕ್ಕೂ ಹೆಚ್ಚು ಆಟೊ ಮತ್ತು ಕ್ಯಾಬ್ ಚಾಲಕರಿಗೆ ವಾರ್ಷಿಕ ತಲಾ ₹15,000 ನೀಡುವ ಯೋಜನೆ ಇದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಯಾವುದೇ ಫಲಾನುಭವಿಯೂ ಈ ಯೋಜನೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಎನ್‌ಡಿಎ ನೇತೃತ್ವದ ಸಮ್ಮಿಶ್ರ ಸರ್ಕಾರವು ಆರ್ಥಿಕ ಬೆಂಬಲ ಮತ್ತು ಫಲಾನುಭವಿಗಳ ಸಂಖ್ಯೆ ಎರಡನ್ನೂ ಹೆಚ್ಚಿಸಲು ನಿರ್ಧರಿಸಿದೆ ಎಂದು ನಾಯ್ದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.