ADVERTISEMENT

ಆಂಧ್ರದಲ್ಲಿ 40 ಮನೆ ಬೆಂಕಿಗೆ ಆಹುತಿ: ಹೊಸ ಮನೆ ನಿರ್ಮಾಣಕ್ಕೆ ಸಿಎಂ ನಾಯ್ಡು ಸೂಚನೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 7:13 IST
Last Updated 13 ಜನವರಿ 2026, 7:13 IST
<div class="paragraphs"><p>ಚಂದ್ರಬಾಬು ನಾಯ್ಡು</p></div>

ಚಂದ್ರಬಾಬು ನಾಯ್ಡು

   

– ಪಿಟಿಐ

ಅಮರಾವತಿ: ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಹಾನಿಗೆ ಒಳಗಾಗಿರುವ ಬುಡಕಟ್ಟು ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವಂತೆ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಂಗಳವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಸರ್ಲಂಕಾ ಗ್ರಾಮದಲ್ಲಿ ಬುಡಕಟ್ಟು ಕುಟುಂಬಗಳಿಗೆ ಸೇರಿದ 40ಕ್ಕೂ ಅಧಿಕ ಹುಲ್ಲಿನ ಮನೆಗಳು ಬೆಂಕಿಗೆ ಆಹುತಿಯಾಗಿವೆ. ಆದರೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದು ಬಂದಿದೆ.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಈ ಅಗ್ನಿ ದುರಂತ ಸಂಭವಿಸಿರುವುದು ಬೇಸರದ ಸಂಗತಿ. ಸಂತ್ರಸ್ತರಿಗೆ ಸಾಧ್ಯವಿರುವ ಸೌಲಭ್ಯಗಳನ್ನು ಒದಗಿಸಿ ಹಾಗೂ ಪ್ರತಿ ಕುಟುಂಬಕ್ಕೆ ತಲಾ ₹25,000 ಪರಿಹಾರ ನೀಡುವಂತೆ ಅವರು ಸೂಚಿಸಿದ್ದಾರೆ.

ಮನೆ ಕಳೆದುಕೊಂಡ ಪ್ರತಿ ಕುಟುಂಬಕ್ಕೂ ಹೊಸ ಮನೆ ಮಂಜೂರು ಮಾಡಬೇಕು. ಮನೆಗಳನ್ನು ನಿರ್ಮಿಸಿ ಹಸ್ತಾಂತರಿಸುವವರೆಗೆ ವಸತಿ ಮತ್ತು ಇತರ ಸಹಾಯವನ್ನು ಒದಗಿಸುವಂತೆ ಅಧಿಕಾರಿಗಳಿಗೆ ನಾಯ್ಡು ಸೂಚಿಸಿದ್ದಾರೆ.

ಅಗ್ನಿ ಅವಘಡದಲ್ಲಿ ನಾಶವಾದ ದಾಖಲೆಗಳು ಮತ್ತು ಆಧಾರ್ ಕಾರ್ಡ್‌ಗಳನ್ನು ವಿತರಿಸಲು ವಿಶೇಷ ಶಿಬಿರಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ನಾಯ್ಡು ನಿರ್ದೇಶನ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.