ಸಾಂದರ್ಭಿಕ ಚಿತ್ರ
ಅಮರಾವತಿ: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಕುರಿತ ಅಧ್ಯಯನಕ್ಕಾಗಿ ಆಂಧ್ರಪ್ರದೇಶ ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ರಾಜೀವ್ ರಂಜನ್ ಮಿಶ್ರಾ ನೇತೃತ್ವದ ಏಕಸದಸ್ಯ ಆಯೋಗವನ್ನು ಸೋಮವಾರ ರಚಿಸಿದೆ.
ಒಳ ಮೀಸಲಾತಿ ಕುರಿತಾಗಿ ಸುಪ್ರೀಂ ಕೋರ್ಟ್ ಆಗಸ್ಟ್ 1ರಂದು ನೀಡಿರುವ ಆದೇಶಕ್ಕೆ ಅನುಗುಣವಾಗಿ ಆಯೋಗವನ್ನು ರಚಿಸಲಾಗಿದೆ.
ಅವಿಭಜಿತ ಜಿಲ್ಲೆಗಳಾದ ಏಲೂರು, ಕೃಷ್ಣಾ ಮತ್ತು ಗುಂಟೂರಿಗೆ ಡಿ.27ರಿಂದ 3ರವರೆಗೆ ಭೇಟಿ ನೀಡಲಿರುವ ಆಯೋಗವು ಒಳಮೀಸಲಾತಿ ಕುರಿತು ಸಭೆಗಳನ್ನು ನಡೆಸಲಿದೆ ಮತ್ತು ಸಂಬಂಧಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಂದ ಮನವಿ ಅಥವಾ ಆಕ್ಷೇಪಣೆಗಳನ್ನು ಸ್ವೀಕರಿಸಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.