ADVERTISEMENT

ಆಂಧ್ರಪ್ರದೇಶ ಹೈಕೋರ್ಟ್‌ನ ಸಿಜೆ ಸಿಕ್ಕಿಂಗೆ ವರ್ಗಾವಣೆ

ಪಿಟಿಐ
Published 31 ಡಿಸೆಂಬರ್ 2020, 10:00 IST
Last Updated 31 ಡಿಸೆಂಬರ್ 2020, 10:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಿತೇಂದ್ರ ಕುಮಾರ್‌ ಮಹೇಶ್ವರಿ ಅವರನ್ನು ಸಿಕ್ಕಿಂ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲಾಗಿದೆ.

ಇದೇ ವೇಳೆ ಸಿಕ್ಕಿಂ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರೂಪ್ ಕುಮಾರ್‌ ಗೋಸ್ವಾಮಿ ಅವರನ್ನು ಆಂಧ್ರಪ್ರದೇಶ ಹೈಕೋರ್ಟ್‌ನ ನೂತನ ಮುಖ್ಯ ನ್ಯಾಯಮೂರ್ತಿಯನ್ನಾಗಿ ವರ್ಗಾಯಿಸಲಾಗಿದೆ. ಈ ಬಗ್ಗೆ ಕಾನೂನಿನ ಸಚಿವಾಲಯವು ಗುರುವಾರ ಅಧಿಸೂಚನೆ ಹೊರಡಿಸಿದೆ.

ಸರ್ಕಾರವನ್ನು ‘ಅಸ್ಥಿರಗೊಳಿಸಲು‘ ರಾಜ್ಯ ಹೈಕೋರ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಅವರು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಅವರಿಗೆ ಅಕ್ಟೋಬರ್‌ 6ರಂದು ದೂರು ನೀಡಿದ್ದರು.

ADVERTISEMENT

ಇದರ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ, ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಸೇರಿದಂತೆ ಇತರೆ ಹೈಕೋರ್ಟ್‌ನ ನಾಲ್ಕು ಮುಖ್ಯ ನ್ಯಾಯಮೂರ್ತಿಗಳನ್ನು ವರ್ಗಾವಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿತ್ತು.

ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಅವರನ್ನು ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.