ಅಪಘಾತ
–ಪ್ರಾತಿನಿಧಿಕ ಚಿತ್ರ
ಹೈದರಾಬಾದ್: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟ ಮಂಡಲ ಸಮೀಪ ಮಾವಿನ ಹಣ್ಣು ತುಂಬಿದ್ದ ಲಾರಿ ಭಾನುವಾರ ರಾತ್ರಿ ಮಗುಚಿ ಬಿದ್ದು 9 ದಿನಗೂಲಿ ಕಾರ್ಮಿಕರು ಸಾವಿಗೀಡಾಗಿದ್ದಾರೆ.
10 ಮಂದಿ ಗಂಭೀರ ಗಾಯಗೊಂಡಿದ್ದು, ಎಲ್ಲರನ್ನೂ ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ಸುಮಾರು 30–40 ಟನ್ ಮಾವಿನ ಹಣ್ಣು ತುಂಬಿದ್ದ ಲಾರಿ ರಾಜಂಪೇಟೆಯಿಂದ ರೈಲ್ವೆ ಕೊಡೂರು ಕಡೆಗೆ ತೆರಳುತ್ತಿತ್ತು. ರೆಡ್ಡಿಪಲ್ಲಿ ಕೆರೆಯ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಲಾರಿ ಉರುಳಿಬಿದ್ದಿದೆ. ಮೃತರನ್ನು ರೈಲ್ವೆ ಕೊಡೂರು ಮಂಡಲದ ಬುಡಕಟ್ಟು ಸಮುದಾಯಕ್ಕೆ ಸೇರಿದ ಕೂಲಿಕಾರ್ಮಿಕರು ಎಂದು ಗುರುತಿಸಲಾಗಿದೆ.
ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿತು ಎಂದು ಲಾರಿಯ ಚಾಲಕ ಹೇಳಿದ್ದಾನೆ. ಆದರೆ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಪರಿಶೀಲನೆಯಲ್ಲಿ ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.