ADVERTISEMENT

ಆಂಧ್ರದಲ್ಲಿ ಪಿಂಚಣಿ ದುಪ್ಪಟ್ಟು

​ಪ್ರಜಾವಾಣಿ ವಾರ್ತೆ
Published 12 ಜನವರಿ 2019, 20:05 IST
Last Updated 12 ಜನವರಿ 2019, 20:05 IST

ಹೈದರಾಬಾದ್‌:ಬಡ ಜನರ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಉತ್ತೇಜನ ನೀಡಲು ಮುಂದಾಗಿರುವ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ಅವರು 10 ವಿವಿಧ ಯೋಜನೆಗಳ ಪಿಂಚಣಿಯನ್ನು ದುಪ್ಪಟ್ಟು ಮಾಡಿದ್ದಾರೆ.

ನೆಲ್ಲೋರ್‌ ಜಿಲ್ಲೆಯ ಬೋಗೂರುನಲ್ಲಿ ನಡೆದ ಸಮಾರಂಭದಲ್ಲಿ, ಹಿರಿಯ ನಾಗರಿಕರಿಗೆ ಹಾಗೂ ವಿಧವೆಯರಿಗೆ ಈವರೆಗೆ ನೀಡುತ್ತಿದ್ದ ₹1,000 ಪಿಂಚಣಿಯನ್ನು ₹2,000ಕ್ಕೆ ಹೆಚ್ಚಿಸಲಾಗಿದೆ ಎಂದು ಅವರು ಪ್ರಕಟಿಸಿದರು. 54.14 ಲಕ್ಷ ಫಲಾನುಭವಿಗಳಿಗೆ ಇದರ ಲಾಭವಾಗಲಿದೆ.

ಮುಂದಿನ ವಾರ ಬರುವ ಸಂಕ್ರಾಂತಿ ಸುಗ್ಗಿಯ ಸಂದರ್ಭದಲ್ಲಿ ನಾಯ್ಡು ಅವರು ಮಹಿಳೆಯರು ಸೇರಿದಂತೆ ರೈತರಿಗೆ ವಿಶೇಷ ಕೊಡುಗೆಗಳನ್ನು ನೀಡಲಿದ್ದಾರೆ ಎಂದು ತೆಲುಗು ದೇಶಂ ಪಕ್ಷದ (ಟಿಡಿಪಿ) ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.