ADVERTISEMENT

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ವಶಕ್ಕೆ ಕೋರಿ ನ್ಯಾಯಾಲಯಕ್ಕೆ ಸಿಐಡಿ ಅರ್ಜಿ

ಪಿಟಿಐ
Published 12 ಸೆಪ್ಟೆಂಬರ್ 2023, 6:52 IST
Last Updated 12 ಸೆಪ್ಟೆಂಬರ್ 2023, 6:52 IST
<div class="paragraphs"><p>ರಾಜಮಹೇಂದ್ರವರಂ ಜೈಲಿನಲ್ಲಿ ಬಂಧಿತ ಚಂದ್ರಬಾಬು ನಾಯ್ಡು</p></div>

ರಾಜಮಹೇಂದ್ರವರಂ ಜೈಲಿನಲ್ಲಿ ಬಂಧಿತ ಚಂದ್ರಬಾಬು ನಾಯ್ಡು

   

ಪಿಟಿಐ ಚಿತ್ರ

ಅಮರಾವತಿ: ಭ್ರಷ್ಟಾಚಾರ ಹಗರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರನ್ನು 15 ದಿನಗಳ ಗೃಹ ಬಂಧನಕ್ಕೆ ಕೋರಿ ಆಂಧ್ರಪ್ರದೇಶ ಅಪರಾಧ ತನಿಖಾ ಇಲಾಖೆ (ಸಿಐಡಿ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಅರ್ಜಿಯನ್ನು ಸೋಮವಾರ ಸಲ್ಲಿಸಲಾಗಿದ್ದು, ಬುಧವಾರ ವಿಚಾರಣೆಗೆ ಬರುವ ನಿರೀಕ್ಷೆಯಿದೆ ಎಂದು ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನವೋಲು ಸುಧಾಕರ್ ರೆಡ್ಡಿ ಹೇಳಿದ್ದಾರೆ. ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥರನ್ನು 15 ದಿನಗಳ ಕಾಲ ಕಸ್ಟಡಿಗೆ ಕೇಳಿದ್ದೇವೆ. ಆದರೆ, ಅಂತಿಮವಾಗಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯವು ನಿರ್ಧರಿಸುತ್ತದೆ’ ಎಂದು ಅವರು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಿ, ಗೃಹ ಬಂಧನಕ್ಕೆ ಒಪ್ಪಿಸುವಂತೆ ಕೋರಿ ನಾಯ್ಡು ಪರ ವಕೀಲರ ತಂಡವು ಸೋಮವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ವಿಜಯವಾಡದಲ್ಲಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ನ್ಯಾಯಾಲಯವು ಈ ಅರ್ಜಿ ಕುರಿತ ವಿಸ್ತೃತ ವಾದಗಳಿಗೆ ಸಾಕ್ಷಿಯಾಯಿತು.

ಕೌಶಲ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗುದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್‌. ಚಂದ್ರಬಾಬು ನಾಯ್ಡು ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದ್ದು, ಗೋದಾವರಿ ಜಿಲ್ಲೆಯ ರಾಜಮಹೇಂದ್ರವರಂನಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.