ADVERTISEMENT

ಆಲಮಟ್ಟಿ ಎತ್ತರ ಹೆಚ್ಚಳ: ಆಂಧ್ರ ಆಕ್ಷೇಪ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 16:26 IST
Last Updated 11 ಫೆಬ್ರುವರಿ 2026, 16:26 IST
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು   

ಹೈದರಾಬಾದ್: ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಆಲಮಟ್ಟಿ ಅಣೆಕಟ್ಟೆಯ ಎತ್ತರವನ್ನು ಹೆಚ್ಚಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್‌ ಪಾಟೀಲ ಅವರೊಂದಿಗೆ ದೆಹಲಿಯಲ್ಲಿ ಮಂಗಳವಾರ ಮಾತುಕತೆ ನಡೆಸಿದ ಅವರು, ‘ಕರ್ನಾಟಕದ ನಿರ್ಧಾರವು ಆಂಧ್ರಪ್ರದೇಶಕ್ಕೆ ಬರುವ ಹೊರಹರಿವಿನ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಹೇಳಿದ್ದಾರೆ. 

ಆಂಧ್ರಪ್ರದೇಶ–ಒಡಿಶಾ ನಡುವಿನ ವಂಸಧಾರ ನದಿ ವಿವಾದವನ್ನು ಶೀಘ್ರದಲ್ಲಿ ಬಗೆಹರಿಸುವಂತೆ ಮತ್ತು ಆಂಧ್ರಪ್ರದೇಶ–ತೆಲಂಗಾಣ ನಡುವಿನ ಗೋದಾವರಿ ನದಿ ನೀರಿನ ಹಂಚಿಕೆಗೆ ನ್ಯಾಯಮಂಡಳಿ ರಚಿಸುವಂತೆಯೂ ನಾಯ್ಡು ಮನವಿ ಮಾಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.