ADVERTISEMENT

ಆಂಧ್ರ ರೈಲು ದುರಂತ: ಮೃತರ ಸಂಖ್ಯೆ 14ಕ್ಕೇರಿಕೆ, ಗಾಯಾಳುಗಳಿಗೆ ಸಿಎಂ ಸಾಂತ್ವನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಅಕ್ಟೋಬರ್ 2023, 13:32 IST
Last Updated 30 ಅಕ್ಟೋಬರ್ 2023, 13:32 IST
<div class="paragraphs"><p>ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ರೈಲು ದುರಂತ ನಡೆದ ಸ್ಥಳವನ್ನು ಪರಿಶೀಲಿಸಿದರು.&nbsp;</p></div>

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ರೈಲು ದುರಂತ ನಡೆದ ಸ್ಥಳವನ್ನು ಪರಿಶೀಲಿಸಿದರು. 

   

-ಪಿಟಿಐ ಚಿತ್ರ

ಅಮರಾವತಿ: ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ADVERTISEMENT

ಕಂಟಕಪಲ್ಲಿ ರೈಲು ನಿಲ್ದಾಣದಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಡಿಕ್ಕಿಯಾಗಿದ್ದು, ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ತಾಂತ್ರಿಕ ಕಾರಣದಿಂದಾಗಿ ರೈಲು ನಿಲ್ದಾಣದಲ್ಲಿ ನಿಂತಿದ್ದ ವಿಶಾಖಪಟ್ಟಣ–ರಾಯಗಢ ಪ್ರಯಾಣಿಕ ರೈಲಿಗೆ ಪಲಾಸ ಎಕ್ಸ್‌ಪ್ರೆಸ್‌ ರೈಲು ಗುದ್ದಿತ್ತು. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿದ್ದವು.

ಸಿಎಂ ಜಗನ್ ಸಾಂತ್ವನ: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಇಂದು ವಿಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.

ಶಿಕ್ಷಣ ಸಚಿವ ಸತ್ಯನಾರಾಯಣ, ವಿಜಯನಗರ ಜಿಲ್ಲಾಧಿಕಾರಿ ಎಸ್.ನಾಗಲಕ್ಷ್ಮಿ ಮತ್ತಿತರರೊಂದಿಗೆ ಸಿಎಂ ಚರ್ಚೆ ನಡೆಸಿದ್ದು, ಚಿಕಿತ್ಸಾ ಸೌಲಭ್ಯದ ಕುರಿತು ಮಾಹಿತಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.