ರಾಯವರಂ: ಆಂಧ್ರಪ್ರದೇಶದ ಡಾ. ಬಿ. ಆರ್. ಅಂಬೇಡ್ಕರ್ ಕೋನಸೀಮೆ ಜಿಲ್ಲೆಯಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಮಂದಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿನ ಕಳಪೆ ನಿರ್ವಹಣೆಯಿಂದ, ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪಟಾಕಿ ತಯಾರಿಕಾ ಘಟಕವು ಪರವಾನಗಿ ಹೊಂದಿದೆ. ಈಗ 6 ಮೃತದೇಹ ಹೊರತೆಗೆಯಲಾಗಿದ್ದು, ಅದರ ಗುರುತು ಪತ್ತೆ ಮಾಡುತ್ತಿದ್ದೇವೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.