ADVERTISEMENT

ಕಾಲ್ತುಳಿತ ಪ್ರಕರಣ: ಆಂಧ್ರದಲ್ಲಿ ಸಾರ್ವಜನಿಕ ರ‍್ಯಾಲಿ ನಿಷೇಧಿಸಿ ಸರ್ಕಾರ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜನವರಿ 2023, 15:24 IST
Last Updated 3 ಜನವರಿ 2023, 15:24 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಅಮರಾವತಿ: ಆಂಧ್ರಪ್ರದೇಶದಲ್ಲಿ ರಾಜಕೀಯ ಸಮಾವೇಶಗಳ ಪರಿಣಾಮ ಕಾಲ್ತುಳಿದಿಂದ ಹತ್ತಕ್ಕೂ ಹೆಚ್ಚು ಜನ ಮೃತಪಟ್ಟ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶ ಸರ್ಕಾರ ಬೃಹತ್‌ ಸಾರ್ವಜನಿಕ ಸಭೆ ಮತ್ತು ರ‍್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಪ್ರತಿಪಕ್ಷಗಳಾದ ತೆಲುಗು ದೇಶಂ (ಟಿಡಿಪಿ), ಬಿಜೆಪಿ ಹಾಗೂ ಜನಸೇನಾ ಪಕ್ಷಗಳು ರಾಜಕೀಯ ಸಮಾವೇಶಗಳನ್ನು ಆಯೋಜಿಸುತ್ತಿದ್ದವು. ಕಳೆದ ಕೆಲವು ದಿನಗಳ ಹಿಂದೆ ಟಿಡಿಪಿ ರ‍್ಯಾಲಿಗಳಲ್ಲಿ ಕಾಲ್ತುಳಿತದಿಂದ 11 ಜನ ಮೃತಪಟ್ಟಿದ್ದರಿಂದ ಆಂಧ್ರ ಸರ್ಕಾರ ರಾಜಕೀಯ ಪಕ್ಷಗಳು ನಡೆಸುವ ಬೃಹತ್‌ ಸಮಾವೇಶ, ರ‍್ಯಾಲಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಹೆದ್ದಾರಿಗಳು ಸೇರಿ ರಸ್ತೆಗಳಲ್ಲಿ ಯಾವುದೇ ರ‍್ಯಾಲಿಗಳನ್ನು ನಡೆಸುವಂತಿಲ್ಲ. ಸಮಾವೇಶಗಳನ್ನು ನಡೆಸಬೇಕಾದರೆ ಪೊಲೀಸರ ಅನುಮತಿ ಕಡ್ಡಾಯ ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.

ADVERTISEMENT

ಸಾರ್ಜನಿಕರ ಹಿತವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮಕೈಗೊಳ್ಳಲಾಗಿದೆ. ಈ ನಿಯಮ ಎಲ್ಲಾ ರಾಜಕೀಯ ಪಕ್ಷಗಳಿಗೆ ಅನ್ವಯವಾಗಲಿದೆ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿಗಳು ಹೇಳಿದ್ದಾರೆ.

ಟಿಡಿಪಿ ನಾಯಕ ಚಂದ್ರ ಬಾಬು ನಾಯ್ಡು ನೇತೃತ್ವದಲ್ಲಿ ನಡೆದ ಎರಡು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಘಟಿಸಿದ ಕಾಲ್ತುಳಿತದಿಂದ ಒಟ್ಟು 11 ಮಂದಿ ಮೃತಪಟ್ಟಿದ್ದರು.

ಡಿಸೆಂಬರ್ 28ರಂದು ನೆಲ್ಲೂರು ಜಿಲ್ಲೆಯಲ್ಲಿ ಕಾಲ್ತುಳಿತದಿಂದ 8 ಮಂದಿ ಮೃತಪಟ್ಟಿದ್ದರು. ಭಾನುವಾರ (ಜ.1) ಗುಂಟೂರಿನಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದರು.ಈ ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದರು.

2024ರಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ‘ನಮ್ಮ ರಾಜ್ಯಕ್ಕೆ ಏಕಿಂತಹ ಹಣೆ ಬರಹ‘ ಎಂಬ ಅರ್ಥ ಬರುವ ಸರಣಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.