ADVERTISEMENT

ಚಂದ್ರಬಾಬು ನಾಯ್ಡು ಜಾಮೀನು ಅರ್ಜಿ ವಜಾಗೊಳಿಸಿದ ಆಂಧ್ರಪ್ರದೇಶ ಹೈಕೋರ್ಟ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಅಕ್ಟೋಬರ್ 2023, 6:29 IST
Last Updated 9 ಅಕ್ಟೋಬರ್ 2023, 6:29 IST
<div class="paragraphs"><p>ಚಂದ್ರಬಾಬು ನಾಯ್ಡು</p></div>

ಚಂದ್ರಬಾಬು ನಾಯ್ಡು

   

ನವದೆಹಲಿ: ಅಮರಾವತಿಯ ಇನ್ನರ್ ರಿಂಗ್ ರೋಡ್ ಹಗರಣಕ್ಕೆ ಸಂಬಂಧಿಸಿದಂತೆ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ಇಂದು (ಸೋಮವಾರ) ವಜಾಗೊಳಿಸಿದೆ.

ಹಗರಣಕ್ಕೆ ಸಂಬಂಧಿಸಿದಂತೆ ಚಂದ್ರಬಾಬು ನಾಯ್ಡು ಮತ್ತು ಅವರ ಪುತ್ರ ನಾರಾ ಲೋಕೇಶ್ ವಿರುದ್ಧ ಸಿಐಡಿ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು.

ADVERTISEMENT

ಕೌಶಲ ಅಭಿವೃದ್ಧಿ ಕಾರ್ಪೊರೇಷನ್‌ನಲ್ಲಿದ್ದ ಹಣ ದುರುಪಯೋಗದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿಗೂ ಹೆಚ್ಚು ನಷ್ಟವಾಗಿದೆ. ಈ ಪ್ರಕರಣದಲ್ಲಿ ಸೆ.9ರಂದು ಬಂಧನವಾಗಿರುವ ಚಂದ್ರಬಾಬು ನಾಯ್ಡು ಅವರನ್ನು ರಾಜಮಹೇಂದ್ರವರಂ ಕೇಂದ್ರೀಯ ಕಾರಾಗೃಹದಲ್ಲಿ ಇಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.