ಮದನಪಲ್ಲಿ: ಆಂಧ್ರಪ್ರದೇಶದಲ್ಲಿ ಪ್ರೇಮಿಗಳ ದಿನವೇ ಯುವಕನೊಬ್ಬ ಯುವತಿ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ, ಮುಖಕ್ಕೆ ಆ್ಯಸಿಡ್ ಎರಚಿರುವ ಘಟನೆ ಶುಕ್ರವಾರ ನಡೆದಿದೆ.
ಆ್ಯಸಿಡ್ ಎರಚಿರುವ ಆರೋಪಿಯನ್ನು ಗಣೇಶ್ ಎಂದು ಗುರುತಿಸಲಾಗಿದೆ. ಈ ಘಟನೆ ಬಳಿಕ ಗಣೇಶ್ ಆತ್ಮಹತ್ಯೆಗೆ ಯತ್ನಿಸಿದ್ದು ಆತನನ್ನು ರಕ್ಷಿಸಲಾಗಿದೆ.
ಗಣೇಶ್ ಹಾಗೂ ಯುವತಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದ್ದು, ಯುವತಿಗೆ ಬರುವ ಏಪ್ರಿಲ್ ತಿಂಗಳಲ್ಲಿ ವಿವಾಹ ನಿಶ್ಚಯವಾಗಿತ್ತು ಎಂದು ಮಾಧ್ಯಮಗಳು ವರದಿ ಮಾಡಿವೆ.
ಅನ್ನಮಯ್ಯ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವತಿ ವಾಸವಿದ್ದು, ಅಲ್ಲಿಗೆ ತೆರಳಿದ ಗಣೇಶ್ ಯುವತಿ ಮೇಲೆ ಹಲ್ಲೆ ಮಾಡಿ, ಆ್ಯಸಿಡ್ ಎರಚಿದ್ದಾನೆ. ತಕ್ಷಣಕ್ಕೆ ಸ್ಥಳೀಯರು ಸಂತ್ರಸ್ತ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಘಟನೆ ಸಂಬಂಧ ತನಿಖೆ ಮಾಡಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಯುವತಿ ಮೇಲೆ ನಡೆದ ಆ್ಯಸಿಡ್ ದಾಳಿಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತೀವ್ರವಾಗಿ ಖಂಡಿಸಿದ್ದಾರೆ. ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮತ್ತು ಸಂತ್ರಸ್ತೆಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.