ADVERTISEMENT

ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 18 ಸಾವು, 6 ಮಂದಿಗೆ ಗಂಭೀರ ಗಾಯ

ಪಿಟಿಐ
Published 28 ಫೆಬ್ರುವರಿ 2026, 14:29 IST
Last Updated 28 ಫೆಬ್ರುವರಿ 2026, 14:29 IST
<div class="paragraphs"><p>ಸ್ಫೋಟದಿಂದ ಎದ್ದಿರುವ ಹೊಗೆ</p></div>

ಸ್ಫೋಟದಿಂದ ಎದ್ದಿರುವ ಹೊಗೆ

   

– ಪಿಟಿಐ ಚಿತ್ರ

ವೆಟ್ಲಪಾಲೆಂ (ಆಂಧ್ರಪ್ರದೇಶ): ಕಾಕಿನಾಡ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ 18 ಮಂದಿ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಆಂಧ್ರಪ್ರದೇಶದ ಗೃಹ ಸಚಿವರಾದ ವಂಗಲಪುಡಿ ಅನಿತಾ ತಿಳಿಸಿದ್ದಾರೆ.

ADVERTISEMENT

ಸಾಮರ್ಲಕೋಟ ಮಂಡಲದ ವೆಟ್ಲಪಾಲೆಂ ಗ್ರಾಮದಲ್ಲಿ ಘಟನೆ ಜರುಗಿದೆ. ಸ್ಫೋಟದ ತೀವ್ರತೆಗೆ ಮೃತದೇಹಗಳು ಹತ್ತಿರದ ಭತ್ತದ ಗದ್ದೆಗಳಿಗೆ ಅಪ್ಪಳಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸದ್ಯದ ಮಾಹಿತಿ ಪ್ರಕಾರ 18 ಮಂದಿ ಮೃತಪಟ್ಟಿದ್ದಾರೆ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನಾನು ಘಟನಾ ಸ್ಥಳಕ್ಕೆ ತೆರಳುತ್ತಿದ್ದೇನೆ‘ ಎಂದು ಅನಿತಾ ಅವರು ಪಿಟಿಐಗೆ ತಿಳಿಸಿದ್ದಾರೆ.

ಸ್ಫೋಟಕ್ಕೆ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಶೇ 90 ರಿಂದ 100 ರಷ್ಟು ಸುಟ್ಟ ಗಾಯಗಳಾಗಿರುವ ಏಳು ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಕಾಕಿನಾಡ ಸರ್ಕಾರಿ ಆಸ್ಪತ್ರೆಯ ಅಧೀಕ್ಷಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.