ADVERTISEMENT

ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಕೋವಿಡ್ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜನವರಿ 2022, 5:02 IST
Last Updated 18 ಜನವರಿ 2022, 5:02 IST
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು
ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು   

ಬೆಂಗಳೂರು: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವಿಪಕ್ಷ ನಾಯಕ ಎನ್. ಚಂದ್ರಬಾಬು ನಾಯ್ಡು ಅವರಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.

ಅವರಿಗೆ ಸೋಂಕಿನ ಸೌಮ್ಯ ಲಕ್ಷಣಗಳಷ್ಟೇ ಕಾಣಿಸಿಕೊಂಡಿದ್ದು, ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡು ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಕೋವಿಡ್ ಸೋಂಕು ದೃಢಪಟ್ಟಿರುವ ಬಗ್ಗೆ ಅವರು ಟ್ವೀಟ್ ಮಾಡಿದ್ದಾರೆ.

ADVERTISEMENT

ಚಂದ್ರಬಾಬು ನಾಯ್ಡು ಅವರು ಮನೆಯಲ್ಲೇ ಕ್ವಾರಂಟೈನ್ ಆಗಿದ್ದು, ತಮ್ಮ ನಿಕಟ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಮತ್ತು ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.