ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರು
ಅಮರಾವತಿ: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದ ಮುಸುನೂರು ಟೋಲ್ ಪ್ಲಾಜಾ ಬಳಿ ಕಾರು –ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರಿನಲ್ಲಿದ್ದವರು ತಮಿಳುನಾಡಿನಿಂದ ಆಂಧ್ರ ಪ್ರದೇಶಕ್ಕೆ ಹಿಂತಿರುಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.