
ಅಮರಾವತಿ: ಸಮರ್ಪಕ ತರಬೇತಿ ಪಡೆದ ಸ್ನಾತಕೋತ್ತರ ಪದವಿ ಪೂರೈಸಿದ ಆಯುರ್ವೇದ ವೈದ್ಯರಿಗೆ ಸ್ವತಂತ್ರವಾಗಿ ಆಯ್ದ ಶಸ್ತ್ರಚಿಕಿತ್ಸೆಗಳನ್ನು ಕೈಗೊಳ್ಳಲು ಆಂಧ್ರಪ್ರದೇಶ ಸರ್ಕಾರ ಅನುಮತಿ ನೀಡಿದೆ.
‘ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯನ್ನು ಆಧುನಿಕ ವೈದ್ಯಕೀಯ ಪದ್ಧತಿಯೊಂದಿಗೆ ಸಂಯೋಜಿಸುವುದಕ್ಕಾಗಿ ಆಂಧ್ರಪ್ರದೇಶ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ’ ಎಂದು ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.
‘ಭಾರತೀಯ ವೈದ್ಯಕೀಯ ಕೇಂದ್ರ ಮಂಡಳಿ–2020 ಮತ್ತು ಭಾರತೀಯ ವೈದ್ಯಕೀಯ ವ್ಯವಸ್ಥೆಗಳ ರಾಷ್ಟ್ರೀಯ ಆಯೋಗದ ಮಾರ್ಗಸೂಚಿಗಳಿಗೆ ಅನುಗುಣವಾಗಿ ಆಯುರ್ವೇದ ವೈದ್ಯರು ಆಯ್ದ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆರೋಗ್ಯ ಸಚಿವ ಸತ್ಯಕುಮಾರ್ ಯಾದವ್ ಅವರು ಒಪ್ಪಿಗೆ ನೀಡಿದ್ದಾರೆ’ ಎಂದು ಪತ್ರಿಕಾ ಪ್ರಕಟಣೆಯಲ್ಲಿ ವಿವರಿಸಲಾಗಿದೆ.
ಸರ್ಕಾರದ ಈ ನಿರ್ಧಾರದಿಂದ ಅರ್ಹ ಆಯುರ್ವೇದ ವೈದ್ಯರು, ಶೇ 39ರಷ್ಟು ಸಾಮಾನ್ಯ ಶಸ್ತ್ರಚಿಕಿತ್ಸೆ ಮತ್ತು ಶೇ 19ರಷ್ಟು ಕಿವಿ, ಮೂಗು ಮತ್ತು ಗಂಟಲು ಮತ್ತು ಕಣ್ಣಿಗೆ ಸಂಬಂಧಿಸಿದ ಚಿಕಿತ್ಸೆಗಳನ್ನು ನೀಡಬಹುದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.