
ನವದೆಹಲಿ: ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಮೃತಪಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಶನಿವಾರ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರವನ್ನು ಪ್ರಧಾನ ಮಂತ್ರಿ ಕಚೇರಿ(ಪಿಎಂಒ) ಘೋಷಿಸಿದೆ.
ಇಂದು
ಬೆಳಿಗ್ಗೆ 11:30ರ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 10 ಜನರು ಸಾವಿಗೀಡಾಗಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರಲ್ಲಿ ಹೆಚ್ಚಿನ ಮಂದಿ ಮಹಿಳೆಯರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆ ಬಗ್ಗೆ ತಿಳಿದು ಬಹಳ ನೋವು ಅನುಭವಿಸಿದ್ದೇನೆ. ತಮ್ಮ ಆತ್ಮೀಯರನ್ನು ಕಳೆದುಕೊಂಡವರಿಗೆ ನನ್ನ ಸಂತಾಪಗಳು. ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ’ಎಂದು ಮೋದಿ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಪರಿಹಾರವನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ.
ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.