ಟ್ರಕ್–ಕಾರಿನ ನಡುವೆ ಭೀಕರ ಅಪಘಾತ
ಹೈದರಾಬಾದ್: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯಲ್ಲಿ ಟ್ರಕ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬ ಏಳು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ನೆಲ್ಲೂರಿನವರು ಎಂದು ಗುರುತಿಸಲಾಗಿದೆ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರನ್ನು ಭೇಟಿ ಮಾಡಲು ಕಾರಿನಲ್ಲಿ ಹೊರಟಿದ್ದ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿದ್ದಾರೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್, ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನೆಲ್ಲೂರು ಜಿಲ್ಲೆಯ ಸಂಗಮ್ ಮಂಡಲ ಬಳಿ ಕಾರು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಳಿಕ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ಆತನನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ಹೇಳಿದ್ದಾರೆ.
ಈ ಘಟನೆ ಸಂಬಂಧ ವೈಎಸ್‌ಆರ್‌ಪಿ ಮುಖ್ಯಸ್ಥ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಅಪಘಾತಗಳನ್ನು ತಡೆಗಟ್ಟಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.