ಸಾವು (ಪ್ರಾತಿನಿಧಿಕ ಚಿತ್ರ)
ಗುಂಟೂರು (ಆಂಧ್ರ ಪ್ರದೇಶ): ವಿಜಯವಾಡ– ಗುಂಟೂರು ರಾಷ್ಟ್ರೀಯ ಹೆದ್ದಾರಿಯ ಡಿಜಿಪಿ ಕಚೇರಿಯ ಬಳಿ ಬರ್ಬರವಾಗಿ ಹತ್ಯೆಯಾದ ಸ್ಥಿತಿಯಲ್ಲಿ ಮಹಿಳೆಯ ಶವ ದೊರಕಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತ ಮಹಿಳೆಯನ್ನು 33 ವರ್ಷದ ಲಕ್ಷ್ಮಿ ತಿರುಪತಿಯಮ್ಮ ಎಂದು ಗುರುತಿಸಲಾಗಿದೆ. ಮಹಿಳೆಗೆ ಇಬ್ಬರು ಮಕ್ಕಳಿದ್ದು, ವಿಜಯವಾಡದ ರಾಣಿಗಿರಿ ನಿವಾಸಿಯಾಗಿದ್ದಾರೆ. ಮಹಿಳೆ ಲೈಂಗಿಕ ಕಾರ್ಯಕರ್ತೆ ಎಂದು ಶಂಕಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯ ಗಂಟಲನ್ನು ಸೀಳಿ ಹತ್ಯೆ ಮಾಡಲಾಗಿದೆ. ಭಾನುವಾರ ಸಂಜೆ 7.30 ರಿಂದ 8 ಗಂಟೆಯ ಹೊತ್ತಿಗೆ ಘಟನೆ ನಡೆದಿದೆ. ಸ್ಥಳದಿಂದ ಕೆಲವು ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.