
ಪಿಟಿಐ
ಅಮರಾವತಿ: ಈ ವರ್ಷ ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳಲ್ಲಿ ಸಂಭವಿಸಿದ ದುರ್ಘಟನೆಗಳಲ್ಲಿ 22 ಮಂದಿ ಮೃತಪಟ್ಟು, 100ರಷ್ಟು ಜನರು ಗಾಯಗೊಂಡಿದ್ದಾರೆ.
ಶನಿವಾರವಷ್ಟೆ, ಶ್ರೀಕಾಕುಳಂ ಜಿಲ್ಲೆಯ ಕಾಸಿಬುಗ್ಗಾದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 10 ಜನರು ಮೃತಪಟ್ಟಿದ್ದಾರೆ.
ಏಪ್ರಿಲ್‌ನಲ್ಲಿ ವಿಶಾಖಪಟ್ಟಣ ಸಮೀಪದ ಸಿಂಹಾಚಲದಲ್ಲಿರುವ ಶ್ರೀ ವರಾಹ ಲಕ್ಷ್ಮಿ ದೇವಸ್ಥಾನದಲ್ಲಿ ಸಂಭವಿಸಿದ ಅವಘಡದಲ್ಲಿ 7 ಜನರು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಶಿಥಿಲಗೊಂಡಿದ್ದ ಗೋಡೆ ಕುಸಿದು ಅವಘಡ ಸಂಭವಿಸಿತ್ತು.
ಜನವರಿಯಲ್ಲಿ ತಿರುಪತಿಯ ಬೈರಾಗಿ ಪಟ್ಟೇದದಲ್ಲಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 6 ಜನ ಭಕ್ತರು ಮೃತಪಟ್ಟು, ಇತರ 40 ಮಂದಿ ಗಾಯಗೊಂಡಿದ್ದರು. ವೈಕುಂಠ ದ್ವಾರ ದರ್ಶನದ ಟಿಕೆಟ್ ಖರೀದಿಗಾಗಿ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದ ವೇಳೆ ಕಾಲ್ತುಳಿತ ಉಂಟಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.