ADVERTISEMENT

ಮಿನಿ ಟ್ರಕ್‌ ಮೇಲೆ ಬಿದ್ದ ಮಾವು ತುಂಬಿದ್ದ ಲಾರಿ; 9 ಸಾವು, 11 ಮಂದಿಗೆ ಗಾಯ

ಪಿಟಿಐ
Published 14 ಜುಲೈ 2025, 5:16 IST
Last Updated 14 ಜುಲೈ 2025, 5:16 IST
<div class="paragraphs"><p>ಅಪಘಾತ</p></div>

ಅಪಘಾತ

   

–ಪ್ರಾತಿನಿಧಿಕ ಚಿತ್ರ

ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ರೆಡ್ಡಿಚೆರುವು ಬಳಿ ಮಾವು ತುಂಬಿದ್ದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ ಬಂಬತ್ತು ಜನರು ಮೃತಪಟ್ಟಿದ್ದು, ಹನ್ನೊಂದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ADVERTISEMENT

ಈ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಟ್ರಕ್‌ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಲಾರಿಯ ಹಿಂದಿನ ಚಕ್ರ ಮರಳಿನಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ಲಾರಿ ಮಿನಿ ಟ್ರಕ್‌ ಮೇಲೆ ಬಿದ್ದು ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.