ADVERTISEMENT

ಆಂಧ್ರದಲ್ಲಿ ಮತಯಂತ್ರ ಧ್ವಂಸಗೊಳಿಸಿದ ಜನಸೇನಾ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2019, 5:38 IST
Last Updated 11 ಏಪ್ರಿಲ್ 2019, 5:38 IST
   

ಕಡಪ: ಜನಸೇನಾ ಪಕ್ಷದ ಅಭ್ಯರ್ಥಿ ಮಧುಸೂದನ್ ಗುಪ್ತಾಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಅದನ್ನು ಧ್ವಂಸಗೊಳಿಸಿ ನೆಲಕ್ಕೆ ಬಿಸಾಡಿದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

ಅನಂತಪುರ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗೂಟಿ ಮತಗಟ್ಟೆಯಲ್ಲಿ ಈ ಘಟನೆ ನಡೆದಿದೆ. ಸ್ಥಳದಲ್ಲೇ ಇದ್ದ ಪೊಲೀಸರು ಕೂಡಲೇ ಮಧುಸೂದನ್‌ ಗುಪ್ತಾ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ.

ಮತದಾನ ಆರಂಭವಾಗಿ 90 ನಿಮಿಷಗಳ ಬಳಿಕ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದೆ. ಚುನಾವಣಾ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸಲು ಮುಂದಾದರೂ ಅದು ದರಸ್ತಿಯಾಗದ ಕಾರಣ ಆಕ್ರೋಶಗೊಂಡ ಮಧುಸೂದನ್‌ ಗುಪ್ತ ಮತಯಂತ್ರವನ್ನು ಧ್ವಂಸಗೊಳಿಸಿದ್ದಾರೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.‌

ADVERTISEMENT

ಹಿಂದೂಪುರದ ಕೆಲವು ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ:ಚಿತ್ರನಟ ನಂದಮೂರಿ ಬಾಲಕೃಷ್ಣ ಪ್ರತಿನಿಧಿಸುವ ಹಿಂದೂಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕಾರಿಸಲಾಗಿದೆ. ಕುಡಿಯುವ ನೀರು, ರಸ್ತೆ , ಸಾರಿಗೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು ಆಗಿಲ್ಲ ಎಂದು ಆರೋಪಿಸಿ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದಾರೆ.

ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಮತದಾನ ಬಹಿಷ್ಕರಿಸಿರುವ ಗ್ರಾಮಗಳಿಗೆ ಆಗಮಿಸಿ ಮತದಾನ ಮಾಡುವಂತೆ ಗ್ರಾಮಸ್ಥರ ಮನವೊಲಿಕೆ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.