ADVERTISEMENT

ಹೇಮಂತ್‌ ಸೊರೇನ್‌ ವಿರುದ್ಧ ಜಗನ್‌ಮೋಹನ್‌ರೆಡ್ಡಿ ಟ್ವೀಟ್‌

ಪ್ರಧಾನಿ ಕೋವಿಡ್‌ ಬಿಕ್ಕಟ್ಟಿನ ಗಂಭೀರತೆಯನ್ನು ಅರಿಯುವ ಬದಲು ಮನ್‌ ಕಿ ಬಾತ್‌– ಟೀಕೆ

ಪಿಟಿಐ
Published 7 ಮೇ 2021, 15:25 IST
Last Updated 7 ಮೇ 2021, 15:25 IST
ವೈ,ಎಸ್‌.ಜಗನ್‌ಮೋಹನ್‌ ರೆಡ್ಡಿ
ವೈ,ಎಸ್‌.ಜಗನ್‌ಮೋಹನ್‌ ರೆಡ್ಡಿ   

ಅಮರಾವತಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ವಿರುದ್ಧ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್ ರೆಡ್ಡಿ ಶುಕ್ರವಾರ ವಾಗ್ದಾಳಿ ನಡೆಸಿದರು.

‘ಆತ್ಮೀಯ ಹೇಮಂತ್‌ ಸೊರೇನ್‌ ಅವರೇ ನಿಮ್ಮ ಬಗ್ಗೆ ನನಗೆ ಅಪಾರ ಗೌರವ ಇದೆ. ಒಬ್ಬ ಸಹೋದರನಾಗಿ ನಾನು ನಿಮಗೆ ಹೇಳಬಯಸುವುದೇನೆಂದರೆ, ನಮ್ಮ ಭಿನ್ನಾಭಿಪ್ರಾಯಗಳು ಏನೇ ಇರಬಹುದು, ರಾಜಕಾರಣದಲ್ಲಿ ಈ ಮಟ್ಟಕ್ಕೆ ಇಳಿಯುವುದರಿಂದ ನಾವೇ ನಮ್ಮ ದೇಶವನ್ನು ದುರ್ಬಲಗೊಳಿಸಿದಂತಾಗುತ್ತದೆ’ ಎಂದು ಜಗನ್‌ಮೋಹನ್‌ ರೆಡ್ಡಿ ಟ್ವೀಟ್‌ ಮಾಡಿದ್ದಾರೆ.

ಕೋವಿಡ್‌–19 ಪರಿಸ್ಥಿತಿ ನಿರ್ವಹಣೆ ಕುರಿತು ಮಾಹಿತಿ ಪಡೆಯುವ ಸಲುವಾಗಿ ಪ್ರಧಾನಿ ಮೋದಿ ಗುರುವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದ್ದರು.

ADVERTISEMENT

ಈ ಕುರಿತು ಪ್ರತಿಕ್ರಿಯಿಸಿದ್ದ ಜಾರ್ಖಂಡ್‌ ಮುಖ್ಯಮಂತ್ರಿ ಸೊರೇನ್‌ , ‘‍ಪ್ರಧಾನಿ ರಾಜ್ಯದಲ್ಲಿನ ಕೋವಿಡ್‌ ಬಿಕ್ಕಟ್ಟಿನ ಗಂಭೀರತೆಯನ್ನು ಅರಿಯುವ ಬದಲು ‘ಮನ್‌ ಕಿ ಬಾತ್‌‘ ಆಡುತ್ತಿದ್ದರು’ ಎಂದು ಟ್ವೀಟ್‌ ಮಾಡಿದ್ದರು. ಈ ಟ್ವೀಟ್‌ ಆಕ್ಷೇಪಿಸಿರುವ ಜಗನ್‌ಮೋಹನ್‌ ರೆಡ್ಡಿ, ಸೊರೇನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ದೂರುತ್ತಾ ಕೂಡುವುದು ಸರಿಯಲ್ಲ. ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಪ್ರಧಾನಿಯವರ ಕೈಬಲಪಡಿಸುವುದು ಮುಖ್ಯ’ ಎಂದೂ ಅವರು ಹೇಳಿದ್ದಾರೆ. ಆದರೆ, ಈ ಬಗ್ಗೆ ಸೊರೇನ್‌ ಪ್ರತಿಕ್ರಿಯೆ ನೀಡಿಲ್ಲ.

ಸಂತೋಷ್‌ ವಾಗ್ದಾಳಿ: ಇದೇ ವಿಷಯವಾಗಿ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಸೇರಿದಂತೆ ಹಲವು ಮುಖಂಡರು ಸೊರೇನ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಇದು ಕೆಲವು ರಾಜಕೀಯ ಮುಖಂಡರು ಯಾವ ಮಟ್ಟಕ್ಕೆ ಇಳಿಯಬಲ್ಲರು ಎಂಬುದನ್ನು ಇದು ತೋರಿಸುತ್ತದೆ. ಮುಖ್ಯಮಂತ್ರಿ ಸ್ಥಾನದಲ್ಲಿರುವ ಇವರಿಗೆ ಕನಿಷ್ಠ ವಿನಯವೂ ಇಲ್ಲ’ ಎಂದು ಸಂತೋಷ್‌ ಅವರು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.