ಮುಜಾಫರನಗರ(ಉತ್ತರ ಪ್ರದೇಶ): ದೆಹಲಿ ಹಿಂಸಾಚಾರದಲ್ಲಿ ಸಿಲುಕಿ ಸಾವಿಗೀಡಾಗಿದ್ದ ಐಬಿ ಅಧಿಕಾರಿ ಅಂಕಿತ್ ಶರ್ಮ ಅವರ ಅಂತ್ಯ ಸಂಸ್ಕಾರದಲ್ಲಿ ದೆಹಲಿ ಪೊಲೀಸರು ಹಾಗೂ ಕೇಂದ್ರ ಸಚಿವ ಸಂಜೀವ್ ಬಾಲ್ಯನ್ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಫೆ.26ರಂದು ಈಶಾನ್ಯ ದೆಹಲಿಯ ಚಾಂದ್ ಬಾಗ್ ಪ್ರದೇಶದಲ್ಲಿ ಶರ್ಮ ಅವರ ಮೃತದೇಹ ಪತ್ತೆಯಾಗಿತ್ತು. ಕೇಂದ್ರ ಗುಪ್ತಚರವಿಭಾಗದ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಂಕಿತ್ ಶರ್ಮರನ್ನೂ ಚಾಂದ್ ಬಾಗ್ ಪ್ರದೇಶದಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.
ಈ ಸಮಯದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಅಪರಿಚಿತರು ಅಂಕಿತ್ ಶರ್ಮಾ ಅವರ ಮೇಲೂ ಹಲ್ಲೆ ನಡೆಸಿದ್ದರು. ಆ ಸಮಯದಲ್ಲಿ ಯಾರೂ ಆಸ್ಪತ್ರೆಗೆ ದಾಖಲಿಸಿರಲಿಲ್ಲ. ತೀವ್ರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.