
ಪಿಟಿಐ
ದೆಹಲಿ: 2022ರಲ್ಲಿ ನಡೆದಿದ್ದ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರ ವಿರುದ್ಧದ ಪೋಸ್ಟ್‌ಗಳನ್ನು 24 ಗಂಟೆಗಳಲ್ಲಿ ಅಳಿಸಿ ಹಾಕುವಂತೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಸಂಬಂಧ ಗೌತಮ್ ಅವರು ಮಾನಹಾನಿ ದೂರು ದಾಖಲಿಸಿದ್ದರು. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮಿನಿ ಪುಷ್ಕರ್ಣ ಅವರು, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಗೌತಮ್ ಅವರ ವಿರುದ್ಧ ಯಾವುದೇ ರೀತಿಯ ಹೇಳಿಕೆಗಳನ್ನು ಪೋಸ್ಟ್ ಮಾಡದಂತೆ ಎರಡೂ ಪಕ್ಷಗಳಿಗೆ ತಾಕೀತು ಮಾಡಿದರು.
‘24 ತಾಸುಗಳ ಒಳಗಾಗಿ ಅಳಿಸಿಹಾಕದಿದ್ದಲ್ಲಿ, ಸಾಮಾಜಿಕ ಮಾಧ್ಯಮ ವೇದಿಕೆಯೇ ನಿಯಮದ ಪ್ರಕಾರ ಪೋಸ್ಟ್‌ಗಳನ್ನು ಅಳಿಸಿಹಾಕಲಿದೆ’ ಎಂದು ಸ್ಪಷ್ಟಪಡಿಸಿದರು.
2022ರಲ್ಲಿ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿದ್ದ ಅಂಕಿತಾ ಅವರ ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಪುಲಕಿತ್ ಆರ್ಯ ಮತ್ತು ನೌಕರರಾದ ಸೌರಭ್ ಬಾಸ್ಕರ್, ಅಂಕಿತ್ ಗುಪ್ತಾ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಸೆಷನ್ಸ್ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇತ್ತೀಚೆಗೆ ಬಹಿರಂಗವಾದ ಆಡಿಯೊ ಕ್ಲಿಪ್‌ವೊಂದರಲ್ಲಿ ಪ್ರಕರಣಕ್ಕೂ ‘ಅತಿಗಣ್ಯ ‘ವಿಐಪಿ’ಯೊಬ್ಬರಿಗೂ ಸಂಬಂಧವಿದೆ ಎಂದು ಆರೋಪಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.