ADVERTISEMENT

ಅಂಕಿತಾ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಪೋಷಕರಿಂದ ಧರಣಿ

ಪಿಟಿಐ
Published 22 ನವೆಂಬರ್ 2022, 12:49 IST
Last Updated 22 ನವೆಂಬರ್ 2022, 12:49 IST
.
.   

ಡೆಹ್ರಾಡೂನ್ (ಉತ್ತರಾಖಂಡ): ಸ್ವಾಗತಕಾರಿಣಿಯಾಗಿದ್ದ ಅಂಕಿತಾ ಭಂಡಾರಿ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಸಂತ್ರಸ್ತೆಯ ಪೋಷಕರು ಮಂಗಳವಾರ ಋಷಿಕೇಶದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಯು ತಪ್ಪಿತಸ್ಥರನ್ನು ರಕ್ಷಿಸುವ ಒತ್ತಡದಲ್ಲಿದೆ. ಹಾಗಾಗಿ ನಮಗೆ ಈ ತನಿಖೆಯಲ್ಲಿ ನಂಬಿಕೆಯಿಲ್ಲ ಎಂದು ಆಗ್ರಹಿಸಿರುವ ಅಂಕಿತಾ ತಂದೆ ವೀರೇಂದ್ರ ಸಿಂಗ್ ಭಂಡಾರಿ ಅವರು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ.

ಅಂಕಿತಾ ಸಾವಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿ ಇಲ್ಲಿಯ ಯುವ ನ್ಯಾಯ ಸಂಘರ್ಷ ಸಮಿತಿಯು ಋಷಿಕೇಶದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರಲ್ಲಿ ಸಂತ್ರಸ್ತೆಯ ಪೋಷಕರು ಪಾಲ್ಗೊಂಡಿದ್ದರು.

ADVERTISEMENT

ರಿಷಿಕೇಶ ಸಮೀಪದ ವನಂತರಾ ರೆಸಾರ್ಟ್‌ನಲ್ಲಿ ಸ್ವಾಗತಕಾರಿಣಿಯಾಗಿ ಕೆಲಸ ಮಾಡುತ್ತಿದ್ದ ಅಂಕಿತಾ ಅವರನ್ನು ರೆಸಾರ್ಡ್‌ ಮಾಲೀಕ ಪುಲ್ಕಿತ್ ಆರ್ಯ ಮತ್ತು ಆತನ ಇಬ್ಬರು ಸ್ನೇಹಿತರು ಲೈಂಗಿಕ ಸೇವೆಗೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದ್ದ ಅಂಕಿತಾ ಅವರನ್ನು ಹತ್ಯೆ ಮಾಡಲಾಗಿತ್ತು. ಸ್ಥಳೀಯ ಬಿಜೆಪಿ ನಾಯಕರೊಬ್ಬರ ಮಗನಾಗಿರುವ ಆರ್ಯ ಮತ್ತು ಆತನ ಸ್ನೇಹಿತರನ್ನು ಹತ್ಯೆಯ ಆರೋಪದಲ್ಲಿ ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.