ADVERTISEMENT

ಪವಾರ್ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ

ವಿಧಾನಸಭಾ ಚುನಾವಣೆಯಲ್ಲಿ ರೋಹಿತ್ ಪವಾರ್ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 19:46 IST
Last Updated 25 ಸೆಪ್ಟೆಂಬರ್ 2019, 19:46 IST
ರೋಹಿತ್ ಪವಾರ್
ರೋಹಿತ್ ಪವಾರ್   

ಮುಂಬೈ: ಎನ್‌ಸಿಪಿ ನಾಯಕ ಶರದ್ ಪವಾರ್ ಅವರ ಕುಟುಂಬದ ಮತ್ತೊಂದು ಕುಡಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಸಜ್ಜಾಗಿದೆ. ಪವಾರ್ ಅವರ ಮೊಮ್ಮಗ ರೋಹಿತ್ ಪವಾರ್ (3) ಅವರು ಅಹಮದ್‌ನಗರ ಜಿಲ್ಲೆಯ ಖಾರ್ಜೆತ್ ಜಾಮಘೇಡ ವಿಧಾನಸಭಾ ಕ್ಷೇತ್ರದಿಂದ ಈ ಬಾರಿ ಕಣಕ್ಕಿಳಿಯಲಿದ್ದಾರೆ.

ಪವಾರ್ ಕುಟುಂಬದಿಂದ ರಾಜಕೀಯಕ್ಕೆ ಪದಾರ್ಪಣೆ ಮಾಡುತ್ತಿರುವ ಐದನೇ ವ್ಯಕ್ತಿ ರೋಹಿತ್. ಇವರು ಪವಾರ್ ಅವರ ಸಹೋದರನ ಮೊಮ್ಮಗ.ಇವರು ಪುಣೆ ಜಿಲ್ಲಾ ಪರಿಷತ್‌ನ ಸದಸ್ಯ ಹಾಗೂ ಸಕ್ಕರೆ ಕಾರ್ಖಾನೆ ಸಂಘಟನೆಯ ಅಧ್ಯಕ್ಷರಾಗಿದ್ದಾರೆ.

ಪವಾರ್ ಸೋದರ ಸಂಬಂಧಿ ಅಜಿತ್ ಪವಾರ್, ಮಗಳು ಸುಪ್ರಿಯಾ ಸುಳೆ ರಾಜಕೀಯದಲ್ಲಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮತ್ತೊಬ್ಬ ಸೋದರ ಸಂಬಂಧಿ ಪಾರ್ಥ ಪವಾರ್ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ ಅವರು ಸೋಲುಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.