ADVERTISEMENT

ವಿವಿಧ ಯೋಜನೆಗಳಿಗೆ ಚಾಲನೆ: ಅಭಿವೃದ್ಧಿ ಹೊಂದಿದ ಪಶ್ಚಿಮ ಬಂಗಾಳದತ್ತ ಹೆಜ್ಜೆ –ಮೋದಿ

ಪಿಟಿಐ
Published 2 ಮಾರ್ಚ್ 2024, 7:45 IST
Last Updated 2 ಮಾರ್ಚ್ 2024, 7:45 IST
<div class="paragraphs"><p>ನಾದಿಯಾ ಜಿಲ್ಲೆಯ&nbsp;ಕೃಷ್ಣನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ</p></div>

ನಾದಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ಕೃಷ್ಣನಗರ (ಪಶ್ಚಿಮ ಬಂಗಾಳ): ಪ್ರಧಾನಿ ನರೇಂದ್ರ ಮೋದಿ ಅವರು ನಾದಿಯಾ ಜಿಲ್ಲೆಯ ಕೃಷ್ಣನಗರದಲ್ಲಿ ರಾಜ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶನಿವಾರ ಚಾಲನೆ ನೀಡಿದರು.

ADVERTISEMENT

ಬಳಿಕ ಮಾತನಾಡಿದ ಅವರು, 'ಇಂದು ಅಭಿವೃದ್ಧಿ ಹೊಂದಿದ ಪಶ್ಚಿಮ ಬಂಗಾಳ ಗುರಿ ಸಾಧಿಸುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಇಟ್ಟಿದ್ದೇವೆ. ರೈಲ್ವೆ, ಬಂದರು, ಪೆಟ್ರೋಲಿಯಂ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳನ್ನೊಳಗೊಂಡ ಅಂದಾಜು ₹ 7,000 ಕೋಟಿ ಮೊತ್ತದ ವಿವಿಧ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ಹಾಗೂ ಉದ್ಘಾಟನೆ ನೆರವೇರಿಸಿದ್ದೆ. ಇಂದು ಮತ್ತೆ ₹ 15,000 ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ನೀಡಿದ್ದೇನೆ' ಎಂದು ಹೇಳಿದ್ದಾರೆ.

'ಈ ಯೋಜನೆಗಳು ಪಶ್ಚಿಮ ಬಂಗಾಳದಲ್ಲಿ ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗಾವಕಾಶ ಸೃಷ್ಟಿಗೆ ವೇಗ ನೀಡಲಿವೆ' ಎಂದು ಅಭಿಪ್ರಾಯಪಟ್ಟಿರುವ ಅವರು, ಪಶ್ಚಿಮ ಬಂಗಾಳವು ಭಾರತದ 'ಪೂರ್ವ ದ್ವಾರ'ವಾಗಿ ಕಾರ್ಯಾಚರಿಸುತ್ತಿದೆ ಎಂದಿದ್ದಾರೆ.

'ಈ ದ್ವಾರವು (ಪಶ್ಚಿಮ ಬಂಗಾಳವು) ಪೂರ್ವದಲ್ಲಿ ದೇಶದ ಅಭಿವೃದ್ಧಿಯ ಪ್ರವೇಶ ಬಿಂದುವಾಗುವ ಸಾಮರ್ಥ್ಯವನ್ನು ಹೊಂದಿದೆ' ಎಂದು ಉಲ್ಲೇಖಿಸಿದ್ದಾರೆ.

'ನಮ್ಮ ಸರ್ಕಾರವು, ಈ ಪ್ರದೇಶದಲ್ಲಿ ರಸ್ತೆ, ರೈಲ್ವೆ, ಜಲ ಮತ್ತು ವಿಮಾನಯಾನದ ಮೂಲಕ ಸಂಪರ್ಕ ಕಲ್ಪಿಸುವ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸುತ್ತಿದೆ' ಎಂದು ಹೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.