
ಪ್ರಜಾವಾಣಿ ವಾರ್ತೆ
ನವದೆಹಲಿ: ರಾಜಸ್ಥಾನದ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆಯ (2025) ನಿಬಂಧನೆಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಸುಪ್ರೀಂ ಕೋರ್ಟ್ ರಾಜಸ್ಥಾನ ಸರ್ಕಾರಕ್ಕೆ ಶುಕ್ರವಾರ ಸೂಚಿಸಿದೆ.
ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮತ್ತು ಇತರರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್, ಸಂದೀಪ್ ಮೆಹ್ತಾ ಅವರ ಪೀಠವು ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ಇದೇ ರೀತಿಯ ಅರ್ಜಿಗಳು ಸುಪ್ರೀಂ ಕೋರ್ಟ್ ಮುಂದೆ ಬಾಕಿ ಉಳಿದಿವೆ ಮತ್ತು ಈ ಅರ್ಜಿಯನ್ನು ಅವುಗಳ ಜತೆಗೆ ಸೇರಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮನವಿ ಮಾಡಿದರು. ಅದನ್ನು ಪೀಠ ಮಾನ್ಯ ಮಾಡಿತು. ಅರ್ಜಿದಾರರ ಪರ ಹಿರಿಯ ವಕೀಲ ಸಂಜಯ್ ಪಾರಿಖ್ ಹಾಜರಾದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.