ADVERTISEMENT

ಮೋದಿ ಸರ್ಕಾರದಿಂದ ನರೇಗಾ ಕಾರ್ಮಿಕರ ಮೇಲೆ ದಬ್ಬಾಳಿಕೆ: ಖರ್ಗೆ ಆರೋಪ

ಪಿಟಿಐ
Published 17 ಏಪ್ರಿಲ್ 2025, 14:31 IST
Last Updated 17 ಏಪ್ರಿಲ್ 2025, 14:31 IST
ಮಲ್ಲಿಕಾರ್ಜುನ ಖರ್ಗೆ–ಪಿಟಿಐ ಚಿತ್ರ
ಮಲ್ಲಿಕಾರ್ಜುನ ಖರ್ಗೆ–ಪಿಟಿಐ ಚಿತ್ರ   

ನವದೆಹಲಿ: ‘ಬಡವರ ವಿರೋಧಿಯಾದ ಕೇಂದ್ರ ಸರ್ಕಾರವು ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದ್ದಾರೆ. ದಿನದ ಕೂಲಿಯನ್ನು ₹400ಕ್ಕೆ ಏರಿಸಬೇಕು ಹಾಗೂ ವರ್ಷದಲ್ಲಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಿಸಬೇಕು ಮಾಡಬೇಕು ಎಂಬ ಪಕ್ಷದ ಬೇಡಿಕೆಯನ್ನು ಪುನರುಚ್ಚರಿಸಿದ್ದಾರೆ. 

‘ಉದ್ಯೋಗ ಖಾತರಿ ಅಡಿಯಲ್ಲಿ ಕೂಲಿ ಏರಿಕೆ, ದಿನಗಳ ಏರಿಕೆ ಮಾಡುವಂತೆ ಎರಡು ಸಮಿತಿಗಳು ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸವೆ. ಹೀಗಿದ್ದರೂ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಲು ಹಿಂದೇಟು ಹಾಕುತ್ತಿದೆ’ ಎಂದು ಖರ್ಗೆ ಅವರು ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT