ಜಮ್ಮು: ಗಡಿ ಜಿಲ್ಲೆಯಾದ ಪೂಂಚ್‌ನ ಹಲವು ಸ್ಥಳಗಳಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಇಂದು (ಭಾನುವಾರ) ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೌಜಿಯಾನ್ ಮತ್ತು ಪಕ್ಕದ ಪ್ರದೇಶಗಳು ಸೇರಿ 8 ಸ್ಥಳಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಭಯೋತ್ಪಾದಕ ಮೂಲಸೌಕರ್ಯಗಳನ್ನು ನಾಶಮಾಡುವುದು, ಜತೆಗೆ ಪಾಕಿಸ್ತಾನ ಮೂಲದ ಭಯೋತ್ಪಾದಕರು ತಮ್ಮ ಸಂಪರ್ಕಗಳನ್ನು ಬಳಸಿಕೊಂಡು ಯುವಕರನ್ನು ವಿಧ್ವಂಸಕ ಚಟುವಟಿಕೆಗಳನ್ನು ನಡೆಸಲು ಪ್ರೇರೇಪಿಸುವ ಪ್ರಯತ್ನಗಳನ್ನು ತಡೆಯುವ ಉದ್ದೇಶದಿಂದ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.