ADVERTISEMENT

ಚಂದ್ರಬಾಬು ನಾಯ್ಡುಗೆ ಜಾಮೀನು: ಸುಪ್ರೀಂಕೋರ್ಟ್‌ಗೆ ಆಂಧ್ರಪ್ರದೇಶ ಸರ್ಕಾರ ಅರ್ಜಿ

ಪಿಟಿಐ
Published 21 ನವೆಂಬರ್ 2023, 14:45 IST
Last Updated 21 ನವೆಂಬರ್ 2023, 14:45 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಕೌಶಲಾಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡುಗೆ ಜಾಮೀನು ನೀಡಿರುವ ಹೈಕೋರ್ಟ್‌ ಆದೇಶದ ವಿರುದ್ಧ, ಆಂಧ್ರಪ್ರದೇಶ ಸರ್ಕಾರ ಮಂಗಳವಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಆಂಧ್ರಪ್ರದೇಶ ಹೈಕೋರ್ಟ್ ನ.20ರಂದು ನಾಯ್ಡುಗೆ ಜಾಮೀನು ಮಂಜೂರು ಮಾಡಿತ್ತು.

ನಾಲ್ಕು ವಾರದ ಮಧ್ಯಂತರ ವೈದ್ಯಕೀಯ ಜಾಮೀನನ್ನು ಪೂರ್ಣ ಪ್ರಮಾಣದ ಜಾಮೀನಾಗಿ ಪರಿವರ್ತಿಸಿದ್ದ ಹೈಕೋರ್ಟ್‌, ನಾಯ್ಡು ಅನಾರೋಗ್ಯವನ್ನು ಪರಿಗಣಿಸಿ ಬಿಡುಗಡೆಗೆ ಆದೇಶಿಸಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.