ADVERTISEMENT

ಹೈದರಾಬಾದ್‌: ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಬಣ್ಣ ಅಳಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2020, 22:00 IST
Last Updated 10 ಮಾರ್ಚ್ 2020, 22:00 IST
   

ಹೈದರಾಬಾದ್‌: ಪಂಚಾಯಿತಿ ಕಟ್ಟಡಗಳಿಗೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಬಣ್ಣ ಬಳಿದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಆಂಧ್ರಪ್ರದೇಶ ಹೈಕೋರ್ಟ್‌, ತಕ್ಷಣವೇ ಅಳಿಸಿ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಕಳೆದ ವರ್ಷ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ನೀಲಿ, ಬಿಳಿ ಮತ್ತು ಹಸಿರು ಬಣ್ಣ ಬಳಿಯಲಾಗಿತ್ತು. ಕೆಲ ಸರ್ಕಾರಿ ಕಟ್ಟಡಗಳಿಗೂ ಇದೇ ಬಣ್ಣ ಬಳಸಲಾಗಿತ್ತು. ಅನಂತಪುರ ಜಿಲ್ಲೆಯ ಗ್ರಾಮ ಪಂಚಾಯಿತಿ ಕಟ್ಟಡವೊಂದರಲ್ಲಿ ತ್ರಿವರ್ಣ ಧ್ವಜದ ಬಣ್ಣಗಳನ್ನು ಅಳಿಸಿ ಪಕ್ಷದ ಬಣ್ಣಗಳನ್ನು ಉಪಯೋಗಿಸಲಾಗಿತ್ತು. ಇದು ತೀವ್ರ ಟೀಕೆಗೆ ಒಳಗಾಗಿತ್ತು.

ಈ ಬಗ್ಗೆ ಮಂಗಳವಾರ ಆದೇಶ ನೀಡಿರುವ ಹೈಕೋರ್ಟ್‌, ಸಾರ್ವಜನಿಕರ ಹಣವನ್ನು ಈ ರೀತಿ ಉಪಯೋಗಿಸಿಕೊಂಡಿರುವುದು ಸರಿ ಅಲ್ಲ ಎಂದು ಹೇಳಿದೆ. ಜತೆಗೆ, 10 ದಿನಗಳಲ್ಲಿ ಬಣ್ಣಗಳನ್ನು ಅಳಿಸುವಂತೆ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.