ADVERTISEMENT

ಕುಪ್ಪಂ: ವೈಎಸ್‌ಆರ್ ಕಾಂಗ್ರೆಸ್‌ ಜಯಭೇರಿ

ಚಂದ್ರಬಾಬು ನಾಯ್ಡು ಸ್ವಕ್ಷೇತ್ರದಲ್ಲಿ ಟಿಡಿಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹಿನ್ನಡೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 22:19 IST
Last Updated 18 ಫೆಬ್ರುವರಿ 2021, 22:19 IST

ಹೈದರಾಬಾದ್‌: ತೆಲುಗು ದೇಶಂ ಪಕ್ಷದ ಭದ್ರಕೋಟೆ ಎನಿಸಿರುವ ಚಿತ್ತೂರು ಜಿಲ್ಲೆಯ ಕುಪ್ಪಂ ವಿಧಾನಸಭಾ ಕ್ಷೇತ್ರದ ಸ್ಥಳೀಯ ಸಂಸ್ಥೆಗಳಿಗೆ ನಡೆದ ಮೂರನೇ ಹಂತದ ಚುನಾವಣೆಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಮೇಲುಗೈ ಸಾಧಿಸಿದೆ.ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಕುಪ್ಪಂ ಕ್ಷೇತ್ರದಿಂದ ಸತತ ಏಳು ಬಾರಿ ಆರಿಸಿ ಬಂದಿದ್ದಾರೆ. ಇಲ್ಲೇ ಟಿಡಿಪಿ ಭಾರಿ ಹಿನ್ನಡೆ ಅನುಭವಿಸಿದೆ.

ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಪಕ್ಷಗಳು ಅಧಿಕೃತವಾಗಿ ಭಾಗಿಯಾಗುವಂತಿಲ್ಲ. ಆದರೆ ಅಭ್ಯರ್ಥಿಗಳನ್ನು ಪಕ್ಷಗಳು ಬೆಂಬಲಿಸುತ್ತವೆ. ಕುಪ್ಪಂನಲ್ಲಿ 89 ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಇದರಲ್ಲಿ 75ರಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಜಯಗಳಿಸಿದ್ದಾರೆ. 14ರಲ್ಲಿ ಟಿಡಿಪಿ ಬೆಂಬಲಿತ ಅಭ್ಯರ್ಥಿಗಳುಜಯಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT