ADVERTISEMENT

ಉತ್ತರ ಪ್ರದೇಶ: ಮದರಸಾ ವಿದ್ಯಾರ್ಥಿಗಳಿಗೆ ಮೊಬೈಲ್‌ ಆ್ಯಪ್‌ ಅಭಿವೃದ್ಧಿ

ಪಿಟಿಐ
Published 7 ಏಪ್ರಿಲ್ 2022, 16:20 IST
Last Updated 7 ಏಪ್ರಿಲ್ 2022, 16:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬಲಿಯಾ (ಉತ್ತರ ಪ್ರದೇಶ) (ಪಿಟಿಐ): ಆಧುನಿಕ ಶಿಕ್ಷಣ ನೀಡುವ ಉದ್ದೇಶದಿಂದ ಮದರಸಾವಿದ್ಯಾರ್ಥಿಗಳಿಗಾಗಿ ಮೊಬೈಲ್‌ ಆಪ್ಲಿಕೇಶನ್‌ ಅಭಿವೃದ್ಧಿಪಡಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

ಜತೆಗೆ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಮೂಡಿಸಲು ಆ್ಯಪ್ ನಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕಥೆಯನ್ನು ಸೇರಿಸಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಡ್ಯಾನಿಸ್‌ ಅಜಾದ್‌ ಅನ್ಸಾರಿ ಹೇಳಿದ್ದಾರೆ.

ಮದರಸಾಗಳ ವಿದ್ಯಾರ್ಥಿಗಳು ದೇಶಭಕ್ತಿ ಮೆರೆಯಬೇಕೆಂದು ಸರ್ಕಾರ ಬಯಸುತ್ತಿದೆ. ಮದರಸಾ ಪಠ್ಯಕ್ರಮಕ್ಕೆ ಅನುಗುಣವಾಗಿ ಆಧುನಿಕ ಶಿಕ್ಷಣ ಒದಗಿಸಲು ಆ್ಯಪ್‌ ಅಭಿವೃದ್ಧಿ ಪಡಿಸಲಾಗುವುದು. ಯೋಗಿ ಆದಿತ್ಯನಾಥ ಸರ್ಕಾರ ಬಡ ಮುಸ್ಲಿಂರ ಮದುವೆಗೂ ಅನುದಾನ ಒದಗಿಸಲಿದೆ ಎಂದು ಅನ್ಸಾರಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.