ADVERTISEMENT

ಕೆಆರ್‌ಎಸ್ ರಕ್ಷಣೆಗೆ ಕೇಂದ್ರಕ್ಕೆ ಮನವಿ: ಸಚಿವ ಶೆಖಾವತ್ ಭೇಟಿ ಮಾಡಿದ ಸುಮಲತಾ

​ಪ್ರಜಾವಾಣಿ ವಾರ್ತೆ
Published 20 ಜುಲೈ 2021, 11:06 IST
Last Updated 20 ಜುಲೈ 2021, 11:06 IST
ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಸುಮಲತಾ ಅಂಬರೀಷ್
ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿದ ಸುಮಲತಾ ಅಂಬರೀಷ್   

ನವದೆಹಲಿ:ಅಕ್ರಮ‌ ಗಣಿಗಾರಿಕೆಯಿಂದ ಕೃಷ್ಣರಾಜ ಸಾಗರ ಜಲಾಶಯವನ್ನು ರಕ್ಷಿಸುವಂತೆ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಮಂಗಳವಾರ ಭೇಟಿ ಮಾಡಿದ ಅವರು, ಈ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು.

ಕೆಆರ್ ಎಸ್ ಸುತ್ತಮುತ್ತಲ ಪ್ರದೇಶದಲ್ಲಿ ನಡೆಸಲಾಗುತ್ತಿರುವ ಗಣಿಕಾರಿಕೆಯಿಂದಾಗಿ ರೈತರ ಜೀವನಾಡಿ ಎಂದು ಹೆಸರಾಗಿರುವ ಪ್ರಮುಖ ಜಲಾಶಯಕ್ಕೆ ಅಪಾಯ ಎದುರಾಗಿದೆ. ಅಲ್ಲದೆ ಕ್ವಾರಿಗಳಲ್ಲಿ ಬಳಸುವ ಸ್ಫೋಟಕಗಳಿಂದಾಗಿ ಇತ್ತೀಚೆಗಷ್ಟೇ ಗೋಡೆ ಕುಸಿದಿರುವುದು ಅಪಾಯದ ಕರೆಗಂಟೆಯಾಗಿದೆ ಎಂದು ಅವರು ವಿವರಿಸಿದರು.

ADVERTISEMENT

ಗಣಿಕಾರಿಕೆಯಿಂದ ಜಲಾಶಯದ ಕಟ್ಟಡಕ್ಕೆ ಉಂಟಾಗಲಿರುವ ಪರಿಣಾಮದ‌ ಕುರಿತು ಅಧ್ಯಯನ ನಡೆಸಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಅವರು ಈ ಸಂದರ್ಭ ಕೋರಿದರು.

ಸಚಿವ ಗಜೇಂದ್ರಸಿಂಗ್ ಶೆಖಾವತ್ ಅವರನ್ನು ಭೇಟಿ ಮಾಡಿ ಚರ್ಚಿಸಿದ ಸಂಸದೆ ಸುಮಲತಾ ಅಂಬರೀಷ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.