ADVERTISEMENT

ಪಶ್ಚಿಮ ಬಂಗಾಳ: ಜಿಲ್ಲಾಧಿಕಾರಿ ದೇವದತ್ತ ರಾಯ್‌ ಕೋವಿಡ್‌ ಸೋಂಕಿನಿಂದ ಸಾವು

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 12:38 IST
Last Updated 15 ಜುಲೈ 2020, 12:38 IST
ದೇವದತ್ತ ರಾಯ್‌
ದೇವದತ್ತ ರಾಯ್‌   

ಕೋಲ್ಕತ್ತಾ: ದೇಶದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಪಶ್ಚಿಮ ಬಂಗಾಳದಲ್ಲಿಜಿಲ್ಲಾಧಿಕಾರಿ ದೇವದತ್ತ ರಾಯ್‌ ಕೋವಿಡ್‌–19ಗೆ ಬಲಿಯಾಗಿದ್ದಾರೆ.

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್‌ನಗರಜಿಲ್ಲಾಧಿಕಾರಿಯಾಗಿ ಅವರು ಸೇವೆ ಸಲ್ಲಿಸುತ್ತಿದ್ದರು. ತೀವ್ರ ಉಸಿರಾಟ ಸಮಸ್ಯೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೊನಾ ವೈರಸ್‌ ಪಾಸಿಟಿವ್‌ ಇತ್ತು ಎಂದು ವೈದ್ಯರು ದೃಢಪಡಿಸಿದ್ದರು. ಸೋಮವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ದೇವದತ್ತ ಅವರ ಪತಿಗೂ ಪಾಸಿಟಿವ್‌ ಇದೆ ಎಂದು ಚಂದನ್‌ನಗರದ ವೈದ್ಯಾಧಿಕಾರಿಗಳು ಹೇಳಿದ್ದಾರೆ.

ADVERTISEMENT

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇವದತ್ತ ರಾಯ್‌ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.