ಚೆನ್ನೈ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಏಪ್ರಿಲ್ 6ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ 13 ಕ್ಷೇತ್ರಗಳಿಗೆ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯನ್ನು ಡಿಎಂಕೆ ಶನಿವಾರ ಬಿಡುಗಡೆ ಮಾಡಿದ್ದು, ಅದರಲ್ಲಿ 12 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.
ಡಿಎಂಕೆ ಪಕ್ಷ ಉರುಲಯನ್‌ಪೆಟ್ಟೈ, ಮುದಲಿಯಾರ್‌ಪೆಟ್ಟೈ, ರಾಜಭವನ ಸೇರಿದಂತೆ ಹನ್ನೆರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿತು. ಬಾಗೂರ್ ಕ್ಷೇತ್ರದ ಅಭ್ಯರ್ಥಿಯನ್ನು ನಂತರ ಘೋಷಿಸಲಾಗುತ್ತದೆ ಎಂದು ಪಕ್ಷ ಹೇಳಿಕೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.