ADVERTISEMENT

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಮತಾ ದೀದಿಯನ್ನು ಆಹ್ವಾನಿಸಿದ ಕೇಜ್ರಿವಾಲ್

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 14:55 IST
Last Updated 10 ಫೆಬ್ರುವರಿ 2020, 14:55 IST
   

ದೆಹಲಿ: ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿರುವುದುಸರಿಯಾದರೆಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತೊಮ್ಮೆ ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೇರಲಿದ್ದಾರೆ.ಗೆಲುವು ನಿಶ್ಚಿತ ಎಂಬ ಭರವಸೆಯಲ್ಲಿರುವ ಕೇಜ್ರಿವಾಲ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿದ್ದಾರೆ.

ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಮುಂದಿನ 5 ವರ್ಷ ದೇಶದ ರಾಜಧಾನಿಯಲ್ಲಿ ನಮ್ಮ ಪಕ್ಷ ಅಧಿಕಾರ ನಡೆಸುತ್ತದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕೇಜ್ರಿವಾಲ್ ಮಮತಾ ಬ್ಯಾನರ್ಜಿ ಅವರಿಗೆ ಕರೆ ಮಾಡಿ ಹೇಳಿದ್ದಾರೆ.

ಆ ದಿನ ಬೇರೆ ಯಾವುದೇ ಕಾರ್ಯಕ್ರಮ ಇಲ್ಲದಿದ್ದರೆ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಬರುವುದಾಗಿ ಮಮತಾ ಹೇಳಿದ್ದಾರೆ ಎಂದು ಬಲ್ಲಮೂಲಗಳು ತಿಳಿಸಿವೆ. ದೆಹಲಿ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಅಧಿಕಾರಕ್ಕೇರುತ್ತಿರುವುದು ಇದು ಮೂರನೇ ಬಾರಿಯಾಗಿದೆ.

ADVERTISEMENT

2013 ಡಿಸೆಂಬರ್ 28ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಕೇಜ್ರಿವಾಲ್ 2014 ಫೆಬ್ರುವರಿ 14 ರಂದು ರಾಜೀನಾಮೆ ನೀಡಿದ್ದರು. ಇದಾದ ನಂತರ 2015 ಫೆಬ್ರುವರಿ 14ರಂದು ಗೆಲುವು ಸಾಧಿಸಿ ಮತ್ತೆ ಮುಖ್ಯಮಂತ್ರಿಯಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.