ADVERTISEMENT

ನವದೆಹಲಿ | ಶಸ್ತ್ರಾಸ್ತ್ರ ಕಳ್ಳಸಾಗಣೆ: ಒಬ್ಬ ಬಂಧನ

ಪಿಟಿಐ
Published 27 ಜುಲೈ 2025, 14:31 IST
Last Updated 27 ಜುಲೈ 2025, 14:31 IST
.
.   

ನವದೆಹಲಿ: ಪಂಜಾಬ್‌ ಪೊಲೀಸ್‌ ಠಾಣೆಯೊಂದರ ಮೇಲೆ ನಡೆದ ಗ್ರೆನೇಡ್‌ ದಾಳಿ ಮತ್ತು ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 22 ವರ್ಷದ ವ್ಯಕ್ತಿಯೊಬ್ಬರನ್ನು ದೆಹಲಿಯಲ್ಲಿ ವಿಶೇಷ ಘಟಕದ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. 

ಗುರುದಾಸಪುರದ ನಿವಾಸಿ ಕರಣ್‌ಬೀರ್‌ ಬಂಧಿತ ವ್ಯಕ್ತಿ. ಅವರು ನಿಷೇಧಿತ ಬಬ್ಬರ್‌ ಖಾಲ್ಸಾ ಇಂಟರ್‌ನ್ಯಾಷನಲ್‌ (ಬಿಕೆಐ) ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪವಿದೆ. ಬಟಾಲಾದ ಕಿಲಾ ಲಾಲ್‌ ಸಿಂಗ್‌ ಪೊಲೀಸ್‌ ಠಾಣೆ ಮೇಲೆ ಏಪ್ರಿಲ್‌ 7ರಂದು ನಡೆದಿದ್ದ ದಾಳಿಯೊಂದಿಗೂ ಅವರು ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. 

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಮತ್ತೊಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.