ಬಂಧನ
ಚಂಡೀಗಢ: ಗಡಿಯಾಚೆಗೆ ಶಸ್ತ್ರಾಸ್ತ್ರಗಳ ಕಳ್ಳಸಾಗಣೆಯಲ್ಲಿ ತೊಡಗಿದ್ದ ಆರೋಪದಡಿ ನಾಲ್ವರನ್ನು ಬಂಧಿಸಲಾಗಿದೆ.
ಪಾಕಿಸ್ತಾನದ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪಿಗಳು, ಪಂಜಾಬ್‌ನ ಪಾತಕಿಗಳಿಗೆ ಸರಬರಾಜು ಮಾಡಲು ಭಾರತ– ಪಾಕಿಸ್ತಾನ ಗಡಿ ಸಮೀಪ ಅಕ್ರಮವಾಗಿ ಶಸ್ತ್ರಾಸ್ತ್ರಗಳನ್ನು ಪಡೆಯುತ್ತಿದ್ದಾಗ ಬಂಧಿಸಲಾಗಿದೆ. ಅವರಿಂದ ಪಿx5 9ಎಂಎಂ ಹಾಗೂ ಗ್ಲಾಕ್ 9ಎಂಎಂ ಸೇರಿದಂತೆ ಏಳು ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಗುರುವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.