
ಪಿಟಿಐ
ಬಂಧನ (ಸಾಂದರ್ಭಿಕ ಚಿತ್ರ)
ಚಂಡೀಗಢ: ಅಮೃತಸರದಲ್ಲಿ ಮಂಗಳವಾರ ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆಯ ಜಾಲವೊಂದನ್ನು ಭೇದಿಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
‘ಆರೋಪಿಗಳು ಪಾಕ್ ಮೂಲದ ಅಕ್ರಮ ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆ ಜಾಲದ ಜತೆಗೆ ಸಂಪರ್ಕ ಹೊಂದಿದ್ದರು. ಶಸ್ತ್ರಾಸ್ತ್ರ ಕಳ್ಳಸಾಗಾಣಿಕೆಗೆ ಡ್ರೋನ್ ಬಳಸುತ್ತಿದ್ದರು ಎಂಬ ಮಾಹಿತಿಯೂ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಅವರಿಂದ 7 ಅತ್ಯಾಧುನಿಕ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪಂಜಾಬ್ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಮಾಧ್ಯಮಗಳಿಗೆ ತಿಳಿಸಿದರು.
ಆರೋಪಿಗಳನ್ನು ರೇಶ್ಮಾ ಸಿಂಗ್ ಅಲಿಯಾಸ್ ಗುಲ್ಲಾ (30), ವಿಶಾಲ್ ಕುಮಾರ್ (22) ಸಮಿತ್ ಅಲಿಯಾಸ್ ಸಚಿನ್ (28) ಎಂದು ಗುರುತಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.