ADVERTISEMENT

ಪ್ರಶ್ನೆಪತ್ರಿಕೆ ಸೋರಿಕೆ: ಪರೀಕ್ಷೆ ರದ್ದುಗೊಳಿಸಿದ ಸೇನೆ

ಪುಣೆಯಲ್ಲಿ ಮೂವರ ಬಂಧನ

ಪಿಟಿಐ
Published 28 ಫೆಬ್ರುವರಿ 2021, 10:49 IST
Last Updated 28 ಫೆಬ್ರುವರಿ 2021, 10:49 IST
.
.   

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದರಿಂದ ದೇಶದಾದ್ಯಂತ ಯೋಧರ ನೇಮಕಾತಿಗೆ ನಡೆಯಬೇಕಾಗಿದ್ದ ಪರೀಕ್ಷೆಯನ್ನು ಸೇನೆ ರದ್ದುಗೊಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುಣೆಯ ಸ್ಥಳೀಯ ಪೊಲೀಸರ ನೆರವಿನೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿ ಸೈನಿಕರ ನೇಮಕಾತಿಗೆ ಸಂಬಂಧಿಸಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಪತ್ತೆ ಮಾಡಲಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.

ADVERTISEMENT

ನೇಮಕಾತಿಗೆ ಸಂಬಂಧಿಸಿದಂತೆ ಭಾರತೀಯ ಸೇನೆ ಯಾವುದೇ ರೀತಿಯ ಅಕ್ರಮಗಳನ್ನು ಸಹಿಸುವುದಿಲ್ಲ. ಅಭ್ಯರ್ಥಿಗಳ ಆಯ್ಕೆ ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಯುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.