ADVERTISEMENT

ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಐದು ದಿನಗಳ ಇಸ್ರೇಲ್ ಪ್ರವಾಸ

ಪಿಟಿಐ
Published 14 ನವೆಂಬರ್ 2021, 6:17 IST
Last Updated 14 ನವೆಂಬರ್ 2021, 6:17 IST
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ   

ನವದೆಹಲಿ: ಯಹೂದಿಗಳ ರಾಷ್ಟ್ರದೊಂದಿಗೆ ಭಾರತದ ರಕ್ಷಣಾ ಮತ್ತು ಭದ್ರತಾ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ಅವರು ಐದು ದಿನಗಳ ಭೇಟಿಗಾಗಿ ಭಾನುವಾರ ಇಸ್ರೇಲ್‌ಗೆ ತೆರಳಿದರು.

ದ್ವಿಪಕ್ಷೀಯ ಬಾಂಧವ್ಯದಲ್ಲಿನ ಕಾರ್ಯತಂತ್ರಗಳನ್ನು ಹೆಚ್ಚಿಸುವ ಸಂಬಂಧ ಮಾರ್ಗಗಳನ್ನು ಕಂಡುಕೊಳ್ಳಲು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಮತ್ತು ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಇಸ್ರೇಲ್‌ಗೆ ಭೇಟಿ ನೀಡಿದ ವಾರಗಳ ನಂತರ ಸೇನಾ ಮುಖ್ಯಸ್ಥರು ಭೇಟಿ ನೀಡುತ್ತಿದ್ದಾರೆ.

ಆಗಸ್ಟ್‌ನಲ್ಲಿ ವಾಯುಪಡೆ ಮುಖ್ಯಸ್ಥ ಆರ್‌.ಕೆ.ಎಸ್‌.ಬದೌರಿಯಾ ಕೂಡ ಇಸ್ರೇಲ್‌ಗೆ ಪ್ರಯಾಣ ಬೆಳೆಸಿದ್ದರು.

ADVERTISEMENT

'ಜನರಲ್ ಎಂಎಂ ನರವಣೆ ಅವರು ಐದು ದಿನಗಳ ಭೇಟಿಗಾಗಿ ಇಸ್ರೇಲ್‌ಗೆ ತೆರಳಿದ್ದು, ಉಭಯ ದೇಶಗಳ ನಡುವಿನ ರಕ್ಷಣಾ ಸಹಕಾರದ ಕುರಿತು ಚರ್ಚಿಸಲಿದ್ದಾರೆ' ಎಂದು ಸೇನೆಯು ಟ್ವೀಟ್ ಮಾಡಿದೆ.

ಈ ವೇಳೆ ಉಭಯ ದೇಶಗಳ ನಡುವಿನ ಒಟ್ಟಾರೆ ಮಿಲಿಟರಿ ಸಹಕಾರವನ್ನು ಹೆಚ್ಚಿಸುವ ಕುರಿತು ಇಸ್ರೇಲ್‌ನ ಉನ್ನತ ಮಿಲಿಟರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತ ಮತ್ತು ಇಸ್ರೇಲ್ ಮಂಗಳವಾರ ಮುಂದಿನ ಪೀಳಿಗೆಯ ತಂತ್ರಜ್ಞಾನಗಳು ಮತ್ತು ಡ್ರೋನ್‌ಗಳು, ರೊಬೊಟಿಕ್ಸ್, ಕೃತಕ ಬುದ್ಧಿಮತ್ತೆ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಂತಹ ಉತ್ಪನ್ನಗಳನ್ನು ಜಂಟಿಯಾಗಿ ಅಭಿವೃದ್ಧಿಪಡಿಸುವ ಒಪ್ಪಂದಕ್ಕೆ ಸಹಿ ಹಾಕಿವೆ.

ಭಾರತವು ಇಸ್ರೇಲ್‌ನಿಂದ ಮಿಲಿಟರಿ ಹಾರ್ಡ್‌ವೇರ್‌ಗಳನ್ನು ಖರೀದಿಸುವ ಪ್ರಮುಖ ರಾಷ್ಟ್ರವಾಗಿದೆ. ಇಸ್ರೇಲ್ ಕಳೆದ ಕೆಲವು ವರ್ಷಗಳಿಂದ ಭಾರತಕ್ಕೆ ವಿವಿಧ ಶಸ್ತ್ರಾಸ್ತ್ರ ವ್ಯವಸ್ಥೆಗಳು, ಕ್ಷಿಪಣಿಗಳು ಮತ್ತು ಮಾನವರಹಿತ ವೈಮಾನಿಕ ವಾಹನಗಳನ್ನು ಪೂರೈಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.