ADVERTISEMENT

ಜಮ್ಮುವಿನ ಎಲ್‌ಒಸಿ ಪ್ರದೇಶಕ್ಕೆ ಸೇನಾ ಮುಖ್ಯಸ್ಥ ನರವಣೆ ಭೇಟಿ

ಪಿಟಿಐ
Published 19 ಅಕ್ಟೋಬರ್ 2021, 8:05 IST
Last Updated 19 ಅಕ್ಟೋಬರ್ 2021, 8:05 IST
ಜಮ್ಮು ಪ್ರವಾಸದಲ್ಲಿರುವ ಸೇನಾ ಮುಖ್ಯಸ್ಥ ಜನರಲ್ ಎಂ. ಎಂ. ನರವಣೆ ಅವರು ಬಿಎಸ್‌ಎಫ್‌ ಯೋಧರೊಂದಿಗೆ ಜಮ್ಮು ಪ್ರದೇಶದಲ್ಲಿರುವ ಗಡಿ ನಿಯಂತ್ರಣ ರೇಖೆಎಲ್‌ಒಸಿ) ವ್ಯಾಪ್ತಿಯ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಜಮ್ಮು ಪ್ರವಾಸದಲ್ಲಿರುವ ಸೇನಾ ಮುಖ್ಯಸ್ಥ ಜನರಲ್ ಎಂ. ಎಂ. ನರವಣೆ ಅವರು ಬಿಎಸ್‌ಎಫ್‌ ಯೋಧರೊಂದಿಗೆ ಜಮ್ಮು ಪ್ರದೇಶದಲ್ಲಿರುವ ಗಡಿ ನಿಯಂತ್ರಣ ರೇಖೆಎಲ್‌ಒಸಿ) ವ್ಯಾಪ್ತಿಯ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.   

ಜಮ್ಮು: ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಣೆ ಅವರು ಮಂಗಳವಾರ ಜಮ್ಮು ಜಿಲ್ಲೆಯಲ್ಲಿರುವ ಗಡಿ ನಿಯಂತ್ರಣ ರೇಖೆ(ಎಲ್‌ಒಸಿ) ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿದರು.

ಎರಡು ದಿನಗಳ ಪ್ರವಾಸಕ್ಕಾಗಿ ಜಮ್ಮುವಿಗೆ ಆಗಮಿಸಿರುವ ಸೇನಾ ಮುಖ್ಯಸ್ಥರು ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳಿವಿಕೆ ತಡೆ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ವೈಟ್ ನೈಟ್‌ ಕಾರ್ಪ್ಸ್‌ ಪ್ರದೇಶಗಳಿಗೆ ಭೇಟಿ ನೀಡಿದ ನರವಣೆ, ಎಲ್‌ಒಸಿ ಉದ್ದಕ್ಕೂ ಪರಿಸ್ಥಿತಿಯನ್ನು ಖುದ್ದು ಪರಿಶೀಲನೆ ನಡೆಸಿದರು‘ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಕಾಶ್ಮೀರ ಕಣಿವೆಯಲ್ಲಿ ಅಲ್ಪಸಂಖ್ಯಾತರ ಹತ್ಯೆ ನಡೆಯುತ್ತಿರುವ ಸಂದರ್ಭದಲ್ಲಿ ನರವಣೆ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಇದೇ ತಿಂಗಳು ಕಣಿವೆ ರಾಜ್ಯದಲ್ಲಿ ಉಗ್ರರು 11 ಮಂದಿ ನಾಗರಿಕರನ್ನು ಹತ್ಯೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.