ADVERTISEMENT

ಜಮ್ಮು: ಗಡಿ ನಿಯಂತ್ರಣ ರೇಖೆ ಸಮೀಪ ಸೇನಾ ಹೆಲಿಕಾಪ್ಟರ್ ಪತನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಮಾರ್ಚ್ 2022, 9:13 IST
Last Updated 11 ಮಾರ್ಚ್ 2022, 9:13 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗುರೆಜ್ ಸೆಕ್ಟರ್‌ನ ಬರೌಮ್ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ವರದಿಯಾಗಿದೆ.

ಉತ್ತರ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಸಮೀಪ ಹೆಲಿಕಾಪ್ಟರ್ ಪತನಗೊಂಡಿದ್ದು, ತಕ್ಷಣಕ್ಕೆ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ ಎಂದು ಪಿಟಿಐ ವರದಿ ಮಾಡಿದೆ.

ಹಿಮದಿಂದ ಆವೃತ್ತವಾಗಿರುವ ಪ್ರದೇಶಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭದ್ರತಾ ಪಡೆಯ ಸಿಬ್ಬಂದಿಗಳು ದೌಡಾಯಿಸಿದ್ದಾರೆ ಎಂದು ಸುದ್ದಿಸಂಸ್ಧೆ ಎಎನ್‌ಐ ಟ್ವೀಟ್ ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.