ADVERTISEMENT

ಸಿಡಿಎಸ್ ಬಿಪಿನ್ ರಾವತ್ ಇದ್ದ ಸೇನಾ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರಿನಲ್ಲಿ ಪತನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2021, 8:51 IST
Last Updated 8 ಡಿಸೆಂಬರ್ 2021, 8:51 IST
ಘಟನಾ ಸ್ಥಳದ ಚಿತ್ರ – ಡೆಕ್ಕನ್ ಹೆರಾಲ್ಡ್ ಕೃಪೆ
ಘಟನಾ ಸ್ಥಳದ ಚಿತ್ರ – ಡೆಕ್ಕನ್ ಹೆರಾಲ್ಡ್ ಕೃಪೆ   

ಚೆನ್ನೈ: ಸೇನಾಪಡೆಗಳ ಮುಖ್ಯಸ್ಥ (ಸಿಡಿಎಸ್‌) ಬಿಪಿನ್‌ ರಾವತ್‌ ಹಾಗೂ ಅವರ ಕುಟುಂಬದವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರಿನಲ್ಲಿ ಪತನಗೊಂಡಿದೆ ಎಂದು ವರದಿಯಾಗಿದೆ.

ಬುಧವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್‌ ಪತನಗೊಂಡಿರುವುದಾಗಿ ರಕ್ಷಣಾ ಇಲಾಖೆಯ ಅಧಿಕೃತ ಮೂಲಗಳು ತಿಳಿಸಿವೆ.

ಹೆಲಿಕಾಪ್ಟರ್‌ನಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಮೂವರನ್ನು ರಕ್ಷಿಸಲಾಗಿದೆ. ಮತ್ತೊಬ್ಬರಿಗಾಗಿ ಶೋಧ ನಡೆಸಲಾಗುತ್ತಿದೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ನೀಲಗಿರೀಸ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಸಿಡಿಎಸ್‌ ಬಿಪಿನ್‌ ರಾವತ್‌ ಇದ್ದ ಭಾರತೀಯ ವಾಯುಪಡೆಯ ‘ಎಂಐ–17ವಿ5’ ಹೆಲಿಕಾಪ್ಟರ್‌ ತಮಿಳುನಾಡಿನ ಕೂನೂರು ಬಳಿ ಅಪಘಾತಕ್ಕೀಡಾಗಿದೆ. ಘಟನೆಗೆ ಕಾರಣವೇನು ಎಂಬ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.