ADVERTISEMENT

ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ಎನ್‌ಕೌಂಟರ್: ಉಗ್ರರ ಗುಂಡಿಗೆ ಯೋಧ ಹುತಾತ್ಮ

ಪಿಟಿಐ
Published 2 ಜುಲೈ 2021, 6:05 IST
Last Updated 2 ಜುಲೈ 2021, 6:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ಭದ್ರತಾ ಪಡೆಶುಕ್ರವಾರ ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಉಗ್ರರು ಅಡಗಿರುವ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಪುಲ್ವಾಮಾ ಜಿಲ್ಲೆಯ ರಾಜಪೊರಾ ಸಮೀಪದ ಹಂಜಿನಿ ಹಳ್ಳಿಯಲ್ಲಿ ಕಾರ್ಯಾಚರಣೆ ಆರಂಭಿಸಿದವು.

ಅಡಗುತಾಣವನ್ನು ಸುತ್ತವರಿದಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡು ಹಾರಿದ್ದಾರೆ. ಯೋಧರು ಸಹ ಈ ದಾಳಿಗೆ ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ತೀವ್ರವಾಗಿ ಗಾಯಗೊಂಡ ಯೋಧರೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.